ಕಾಂಗ್ರೆಸ್ ಮುಳುಗುತ್ತಿರುವ ಹಡಗು

Salahali-Web
ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಪ್ರಚಾರ ಸಭೆಯನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು. ಪ್ರಲ್ಹಾದ್ ಜೋಶಿ, ಜಗದೀಶ ಶೆಟ್ಟರ್, ಉಮೇಶ ಕತ್ತಿ, ಶ್ರೀಮಂತ ಪಾಟೀಲ, ಮಂಗಲ ಅಂಗಡಿ, ಸಿ.ಸಿ.ಪಾಟೀಲ, ಹನುಮಂತ ನಿರಾಣಿ, ಶಾಸಕರಾದ ಮಹಾದೇವಪ್ಪ ಯಾದವಾಡ, ಪಿ.ರಾಜೀವ್ ಇತರರು ಇದ್ದರು.
Published on

ಬೆಳಗಾವಿ: ಕಾಂಗ್ರೆಸ್ ಮುಳುಗುವ ಹಡಗು. ಅದರ ಮೇಲೆ ಎಂದಿಗೂ ಕಾಲಿಡಬೇಡಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಕಾರ್ಯಕರ್ತರಿಗೆ ಸಲಹೆ ನೀಡಿದರು.

ರಾಮದುರ್ಗ ತಾಲೂಕಿನ ಸಾಲಹಳ್ಳಿಯಲ್ಲಿ ಬುಧವಾರ ಬಿಜೆಪಿ ಲೋಕಸಭೆ ಅಭ್ಯರ್ಥಿ ಮಂಗಲ ಅಂಗಡಿ ಪರ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕ ಆಯೋಜಿಸಿದ್ದ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಇದರಿಂದ ಅಭಿವೃದ್ಧಿಗೆ ಅನುಕೂಲವಾಗಲಿದೆ. ಅನಿವಾರ್ಯವಾಗಿ ಸ್ಪರ್ಧಿಸಿರುವ ಮಂಗಲಾ ಅವರನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದರು.

ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಮಾತನಾಡಿ, ಸುರೇಶ ಅಂಗಡಿ ಅವರು ಬೆಳಗಾವಿ-ಕಿತ್ತೂರು-ಧಾರವಾಡ ಮಾರ್ಗದ ರೈಲ್ವೆ ಕಾಮಗಾರಿಗೆ ಅನುಮೋದನೆ ತಂದಿದ್ದಾರೆ. ಆ ಕಾಮಗಾರಿ ಪೂರ್ಣಗೊಳಿಸುವುದಕ್ಕಾಗಿ ಮಂಗಲ ಅಂಗಡಿ ಅವರಿಗೆ ಮತ ನೀಡಿ ಎಂದರು. ಅಭ್ಯರ್ಥಿ ಮಂಗಲ ಅಂಗಡಿ ಮಾತನಾಡಿ, ನಮ್ಮ ಯಜಮಾನರು ರೈಲ್ವೆ ಸಚಿವರಾದ ಬಳಿಕ ಒಂದು ದಿನವೂ ಮನೆಯಲ್ಲಿ ಕುಳಿತುಕೊಳ್ಳಲಿಲ್ಲ. ಅವರ ಅಭಿವೃದ್ಧಿ ಕೆಲಸ ಮುಂದುವರಿಸಲು ಅನಿವಾರ್ಯವಾಗಿ ನಾನು ರಾಜಕೀಯಕ್ಕೆ ಬರಬೇಕಾಗಿದೆ. ನನಗೂ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವರಾದ ಜಗದೀಶ ಶೆಟ್ಟರ್, ಉಮೇಶ ಕತ್ತಿ, ಶ್ರೀಮಂತ ಪಾಟೀಲ, ಸಿ.ಸಿ.ಪಾಟೀಲ, ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ಶಾಸಕರಾದ ಮಹಾದೇವಪ್ಪ ಯಾದವಾಡ, ಪಿ.ರಾಜೀವ್, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ, ಅಮರಸಿಂಹ
ಪಾಟೀಲ, ಸುರೇಶ ಮಾರಿಹಾಳ, ಸುನಂದಾ ಪಾಟೀಲ, ಮಲ್ಲಣ್ಣ ಯಾದವಾಡ, ಡಾ.ಕೆ.ವಿ.ಪಾಟೀಲ, ರಮೇಶ ದೇಶಪಾಂಡೆ, ರೇಣಪ್ಪ ಸೋಮಗೊಂಡ, ಮಾರುತಿ ತುಪ್ಪದ, ದ್ಯಾವಪ್ಪ ಬೆಳವಡಿ ಸೇರಿ ಇತರರಿದ್ದರು.

ರಾಜೇಶ ಬೀಳಗಿ ಸ್ವಾಗತಿಸಿದರು. ಶಂಕರ ಹುರಕಡ್ಲಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net