ಹೆಚ್ಚುವರಿ ಅಕ್ಕಿ ನೀಡದ ಕೇಂದ್ರ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Congress strike at karwar
Published on

ಕಾರವಾರ: ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಅನ್ನ ಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಸುಭಾಷ್ ಸರ್ಕಲ್ ನಲ್ಲಿ ಸೇರಿದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ‌ ಸಾಯಿ ಗಾಂವಕರ್, ಶಕ್ತಿ ಯೋಜನೆಯಿಂದ ಆರ್ಥಿಕ ಚಟುವಟಿಕೆ ಗರಿಗೆದರುತ್ತಿದೆ. ಆರ್ಥಿಕವಾಗಿ ಸರ್ಕಾರಕ್ಕೆ ಹೊರೆಯಾಗುವ ಪ್ರಮೇಯ ಇಲ್ಲ ಎಂದರು.

ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಬಡವರ ಅನ್ನಕ್ಕೆ ಕಲ್ಲು ಹಾಕುವ ಕೆಲಸಕ್ಕೆ ಬಿಜೆಪಿ ಮುಂದಾಗಿದೆ. ತನ್ನ ಸಣ್ಣತನ ತೋರಿಸಿದೆ. ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಆಹಾರ ಭದ್ರತಾ ಕಾಯ್ದೆ ಜಾರಿಗೆ ತರಲಾಗಿತ್ತು‌‌.

ಕಾಂಗ್ರೆಸ್ ಸರ್ಕಾರ ಸದಾ ಬಡವರ ಪರ ಯೋಚಿಸುತ್ತದೆ‌‌. ಬಿಜೆಪಿ ಅಧಿಕಾರಕ್ಕೆ ಏರಿದ ಬಳಿಕ ಆರ್ಥಿಕ ಸ್ಥಿತಿಯೂ ಹದಗೆಟ್ಟಿದೆ' ಎಂದರು.

ಶಾಸಕ ಸತೀಶ ಸೈಲ್, 'ಕಾಂಗ್ರೆಸ್ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದರೆ ಸೋಲುವ ಭಯ ಬಿಜೆಪಿಗೆ ಎದುರಾಗಿದೆ. ಹೀಗಾಗಿ ಯೋಜನೆ ಜಾರಿಗೆ ಅಡ್ಡಿ ಮಾಡಲು ಯತ್ನಿಸುತ್ತಿದೆ' ಎಂದು ಆರೋಪಿಸಿದರು.

ಮಾಜಿ ಶಾಸಕ ವಿ.ಎಸ್‌.ಪಾಟೀಲ, ಪಕ್ಷದ ಜಿಲ್ಲಾ ವಕ್ತಾರ ಕೆ.ಶಂಭು ಶೆಟ್ಟಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸುಜಾತಾ ಗಾಂವಕರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಮೀರ ನಾಯ್ಕ,ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿ, ಪ್ರಮುಖರಾದ,‌ ರತ್ನಾಕರ ನಾಯ್ಕ, ಜಗದೀಶ ಗೌಡ, ಗಣೇಶ ದಾವಣಗೆರೆ, ಇತರರು ಇದ್ದರು

'

.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net