

ತುಮಕೂರು : ಜಿಲ್ಲೆಯ ಜೆಡಿಎಸ್ ಭದ್ರಕೋಟೆ ಛಿದ್ರಗೊಂಡಿದೆ. ಕಾಂಗ್ರೆಸ್ ಅಭೂತಪೂರ್ವ ಗೆಲುವಿನೊಂದಿಗೆ 7 ಕ್ಷೇತ್ರ ಕೈ ವಶಪಡಿಸಿಕೊಂಡರೆ, ಬಿಜೆಪಿ 2, ಜೆಡಿಎಸ್ 2 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಂಡಿತು.
2 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ತುಮಕೂರು ನಗರ ಕ್ಷೇತ್ರದಲ್ಲಿ ಹಾಲಿ ಶಾಸಕ ಬಿಜೆಪಿ ಜಿ.ಬಿ.ಜ್ಯೋತಿಗಣೇಶ್ ಪುನರಾಯ್ಕೆಯಾದರೆ, ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಾಜಿ ಶಾಸಕ ಬಿಜೆಪಿಯ ಬಿ.ಸುರೇಶಗೌಡ ಜಯಗಳಿಸಿದರು.
7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು: ಜಿಲ್ಲೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಜಯಗಳಿಸಿ ಹೊಸ ದಾಖಲೆಯೇ ಬರೆದಿದೆ. ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಸಿಎಂ ಹುದ್ದೆ ರೇಸ್‌ನಲ್ಲಿ ಮಂಚೂಣಿಯಲ್ಲಿರುವ ಡಾ.ಜಿ.ಪರಮೇಶ್ವರ, ಮಧುಗಿರಿ ಕ್ಷೇತ್ರದ ಕೆ.ಎನ್.ರಾಜಣ್ಣ, ಶಿರಾ ಕ್ಷೇತ್ರದಲ್ಲಿ ಟಿ.ಬಿ.ಜಯಚಂದ್ರ, ತಿಪಟೂರು ಕ್ಷೇತ್ರದಲ್ಲಿ ಕೆ.ಷಡಕ್ಷರಿ, ಕುಣಿಗಲ್ ಕ್ಷೇತ್ರದ ಡಾ.ಎಚ್.ಡಿ. ರಂಗನಾಥ್, ಪಾವಗಡದಲ್ಲಿ ಎಚ್.ವಿ.ವೆಂಕಟೇಶ್ ಹಾಗೂ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಸಚಿವ ಎಸ್.ಆರ್.ಶ್ರೀನಿವಾಸ್ ಗೆಲುವಿನ ನಗೆಬೀರಿದರು.
2 ಕ್ಷೇತ್ರಕ್ಕೆ ಜೆಡಿಎಸ್ ಮೀಸಲು: ಜೆಡಿಎಸ್ ಭದ್ರಕೋಟೆಗಳಲ್ಲೊಂದಾದ ತುಮಕೂರು ಜಿಲ್ಲೆಯಲ್ಲಿ ಪಕ್ಷದ ಕೋಟೆ ಕುಸಿದಿದೆ. ತುರುವೇಕೆರೆ ಕ್ಷೇತ್ರದ ಎಂ.ಟಿ.ಕೃಷ್ಣಪ್ಪ ಹಾಗೂ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಸಿ.ಬಿ.ಸುರೇಶ್ ಬಾಬು ಗೆಲುವು ಸಾಧಿಸಿದ್ದು ಸಮಾಧಾನಕರವೆನಿಸಿದೆ.