ಕಾಂಗ್ರೆಸ್ ಅಭ್ಯರ್ಥಿ ಬದಲಾಯಿಸಲು ಒತ್ತಾಯಿಸಿ ಸಮಾವೇಶ

congress ticket
Published on

ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ನಿಯೋಜಿತ ಅಭ್ಯರ್ಥಿಯನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿ ಏ.9ರಂದು ಬೃಹತ್ ಸಮಾವೇಶ ಆಯೋಜಿಸಲಾಗಿದ್ದು 219 ಬೂತ್‌ಗಳಿಂದ 2 ಸಾವಿರ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ನಂದಕುಮಾರ್ ಅಭಿಮಾನಿ ಬಳಗದ ಸಂಚಾಲಕ ಬಾಲಕೃಷ್ಣ ಬಳ್ಳೇರಿ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಂತಿಕಲ್ಲು ಧರ್ಮಶ್ರೀ ಸಭಾಂಗಣದಲ್ಲಿ ನಿಷ್ಠಾವಂತ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿದೆ. ಕಡಬ ಬ್ಲಾಕ್ ಕಾಂಗ್ರೆಸ್ ಸಂಯೋಜಕರೂ ಆಗಿರುವ ಎಚ್.ಎಂ.ನಂದಕುಮಾರ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಬೇಕು ಎಂಬುದು ನಮ್ಮ ಆಗ್ರಹ. ಈ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದೆ ಎಂದರು.

ಈಗಾಗಲೇ ಘೋಷಣೆಯಾದ ಅಭ್ಯರ್ಥಿಯನ್ನು ಬದಲಾಯಿಸುವಂತೆ ಜಿಲ್ಲಾಧ್ಯಕ್ಷರಿಗೆ ಮನವಿ ಮಾಡಲಾಗಿದೆ ರಾಜ್ಯ-ರಾಷ್ಟ್ರೀಯ ನಾಯಕರ ಗಮನಕ್ಕೂ ತರಲಾಗಿದೆ. ಒಂದು ವೇಳೆ ಅಭ್ಯರ್ಥಿ ಬದಲಾಯಿಸದಿದ್ದರೆ ಮುಂದೇನು ಮಾಡಬೇಕು ಎಂಬ ನೆಲೆಯಲ್ಲಿಯೂ ಕಾರ್ಯಕರ್ತರೊಂದಿಗೆ ಸೇರಿ ನಿರ್ಧರಿಸಲಾಗುವುದು. ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಬೇಕಿದ್ದರೆ, ಅಭ್ಯರ್ಥಿ ಬದಲಾವಣೆ ಅನಿವಾರ್ಯ. ಆದ್ದರಿಂದ ಈ ವಿಚಾರವನ್ನು ರಾಜ್ಯ, ರಾಷ್ಟ್ರೀಯ ನಾಯಕರಿಗೆ ಮತ್ತೊಮ್ಮೆ ಮನವರಿಗೆ ಮಾಡಲು ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರಮುಖರಾದ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಗಣೇಶ್ ಕೈಕುರೆ, ಸಚಿನ್‌ರಾಜ್ ಶೆಟ್ಟಿ ಪೆರುವಾಜೆ, ಗೋಕುಲ್‌ದಾಸ್ ಸುಳ್ಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net