ಗ್ಯಾರಂಟಿ ಹಿಂಪಡೆಯಲಿರುವ ಕಾಂಗ್ರೆಸ್

New Tenginakayi New
Published on

ಹುಬ್ಬಳ್ಳಿ : ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರ ಒಂದರ ಹಿಂದೆ ಒಂದರಂತೆ ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಲಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಕಾಂಗ್ರೆಸ್ ಮುಖಂಡರಿಗೆ ಬುದ್ಧಿ ಮಾತು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರು, ಗ್ಯಾರಂಟಿ ಯೋಜನೆಗಳನ್ನು ಮರುಪರಿಶೀಲಿಸುವುದಾಗಿ ಹೇಳಿದ್ದಾರೆ ಎಂದರು.

ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದ ಕಾಂಗ್ರೆಸ್ ಮುಖಂಡರಿಗೇ, ತಾವು ಅಧಿಕಾರಕ್ಕೆ ಬರುತ್ತೇವೆಯೋ ಅಥವಾ ಇಲ್ಲವೋ ಎಂಬುದರ ಗ್ಯಾರಂಟಿ ಇರಲಿಲ್ಲ. ಗ್ಯಾರಂಟಿಗಳಿಂದಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ, ಕಳೆದ ಒಂದೂವರೆ ವರ್ಷದಲ್ಲಿ ಹಗರಣಗಳಿಂದ ನಲುಗಿ ಹೋಗಿದೆ ಎಂದು ಟೀಕಿಸಿದರು.

ಮುಡಾ, ವಾಲ್ಮೀಕಿ ಹಗರಣಗಳು ವಕ್ಪ್ ತಿದ್ದುಪಡಿಯಿಂದಾಗಿ ಕಾಂಗ್ರೆಸ್ ಸರ್ಕಾರ ದಿಕ್ಕುತಪ್ಪಿದಂತಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಸರ್ಕಾರದ ಹಿರಿ-ಕಿರಿಯ ಸಚಿವರು ಸಹ ಸರ್ಕಾರದ ಧೋರಣೆಗೆ ಬೇಸತ್ತಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net