ಲೋಕಸಭೆಯಲ್ಲಿ ಕಾಂಗ್ರೆಸ್ ಗೆದ್ದು, ದೇಶದಲ್ಲಿ ಬದಲಾವಣೆ ತರಲಿದೆ, ಮೃಣಾಲ್ ಹೆಬ್ಬಾಳ್ಕರ್

Screenshot_2023-08-28-12-27-21-30.jpg
Published on

ಬೆಳಗಾವಿ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ರಾಜ್ಯದಲ್ಲಿ ಬದಲಾವಣೆ ತರುತ್ತಿದೆ. ಅದೇ ರೀತಿ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿ ದೇಶದಲ್ಲಿ ಬದಲಾವಣೆ ತರಲಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಯೋಚನೆ ಇಲ್ಲ. ವರಿಷ್ಠರು ಸ್ಪರ್ಧಿಸುವಂತೆ ಸೂಚಿಸಿದರೆ ಸ್ಪರ್ಧಿಸುತ್ತೇನೆ ಎಂದರು. ಕಾರ್ಯಕರ್ತರು ನಮ್ಮ ತಾಯಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಲೋಕಸಭೆಗೆ ಸ್ಪರ್ಧಿಸುವ ವಿಚಾರಗಳ ಚರ್ಚೆಗೆ ಮಾಡುತ್ತಿದ್ದಾರೆ. ಇದು ಸ್ವಾಗತಾರ್ಹ. ಆದರೆ ಪಕ್ಷದ ಮುಖಂಡರು ಈ ಬಗ್ಗೆ ತೀರ್ಮಾನ ಕೈಗೊಳ್ಳುವರು. ನನ್ನ ತಾಯಿ ಸಚಿವೆಯಾದ ನಂತರ ನನ್ನ ಮೇಲೆ ಕಳೆದ ಬಾರಿಗಿಂತ ಜವಾಬ್ದಾರಿ ಹೆಚ್ಚಿದೆ. ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಹೆಚ್ಚು ಗಮನ ಹರಿಸುತ್ತೇವೆ. ಕಾಂಗ್ರೆಸ್‌ನ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದರು. ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿಯಾಗಬೇಕಿತ್ತು. ಆದರೆ, ಮೈಸೂರಿನಲ್ಲಿ ಆಗುತ್ತಿರುವುದು ಬೇಸರವೇನಲ್ಲ. ಎರಡೂ ಸ್ಥಳಗಳು ಅಂತಿಮವಾಗಿ ಕರ್ನಾಟಕದಲ್ಲಿಯೇ ಇವೆ. ಇದು ದೇಶದ ಇತಿಹಾಸದಲ್ಲೇ ಅತಿ ದೊಡ್ಡ ಜನಪರ ಕಾರ್ಯಕ್ರಮ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net