

ಸರಗೂರು ; ಶಾಸಕ ಅನಿಲ್ ಚಿಕ್ಕಮಾದು ಅವರು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿ ಮುಂಭಾಗ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಪಟ್ಟಣ ಪಂಚಾಯಿತಿ ಸದಸ್ಯ ಶ್ರೀನಿವಾಸ, ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಹಾಗೂ ಈಡಿಗ ಸಮಾಜದ ತಾಲೂಕು ಅಧ್ಯಕ್ಷ ಎಸ್.ಎನ್. ನಾಗರಾಜು, ಪಪಂ ಸದಸ್ಯ ಚೆಲುವ ಕೃಷ್ಣ,ಅಕ್ರಮ ಸಕ್ರಮ ಸಮಿತಿ ಸದಸ್ಯ ಎಸ್.ಎನ್. ಪ್ರಭುಸ್ವಾಮಿ, ಶಿವಶಂಕರ್, ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು, ಜಿಲ್ಲಾ ಕಾರ್ಯದರ್ಶಿ ಕಳಸೂರು ಬಸವರಾಜು, ಗ್ರಾಪಂ ಸದಸ್ಯ ಯಶವಂತಪುರ ಶಿವಲಿಂಗಯ್ಯ, ಅಖಿಲ ಭಾರತ ಲಿಂಗಾಯತ ಮಹಾಸಭಾ ಯುವ ಘಟಕದ ಅಧ್ಯಕ್ಷ ಪಿ.ನಂದೀಶ್, ಮುಖಂಡರಾದ ಮಂಜುನಾಥ, ರಂಗನಾಥ್ , ಯೋಗೇಶ್, ಎಸ್.ಎಸ್.ಬಸವರಾಜು, ನಾಗರಾಜರಾಮ್, ಮಣಿ ಬಿಲ್ಲಯ್ಯ, ಸುಹೇಲ್ ಲೋಕೇಶ್, ಸೂರ್ಯ ಮಣಿಕಂಠ, ಮಾದು, ದೇವರಾಜು, ದಯಾನಂದ, ಮಹೇಶ್ ಲಂಕೆ ಇತರರು ಇದ್ದರು.