ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

web 5
Published on

ಧಾರವಾಡ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ವಿಧಿಸಿದ್ದ 2 ವರ್ಷಗಳ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದ ಬಳಿ ಶುಕ್ರವಾರ ಸಂಭ್ರಮಾಚರಣೆ ಮಾಡಿದರು.
ಮುಖಂಡ ದೀಪಕ ಚಿಂಚೋರೆ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನಾಗರಿಕರಲ್ಲಿ ಸಮಾಧಾನ ತಂದಿದೆ ಎಂದರು.
ಪಾಲಿಕೆ ಪ್ರತಿಪಕ್ಷ ನಾಯಕಿ ಸುವರ್ಣಾ ಕಲಕುಂಟ್ಲ ಮಾತನಾಡಿ, ಭಾರತದ ಪ್ರಜಾತಂತ್ರ ವ್ಯವಸ್ಥೆಯಲ್ಲಿ ನ್ಯಾಯ ಎಲ್ಲರಿಗೂ ಸಮಾನ ಎಂಬುದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ ಎಂದರ.
ಕೆಪಿಸಿಸಿ ಸದಸ್ಯ ರಾಬರ್ಟ್ ದದ್ದಾಪುರಿ ಮಾತನಾಡಿ, ಸುಪ್ರೀಂ ಕೋರ್ಟ್‌ನ ತೀರ್ಮಾನವು ನ್ಯಾಯದೇವತೆ ನಿಷ್ಪಕ್ಷಪಾತಳು ಎಂಬುದನ್ನು ಸಾಬೀತುಪಡಿಸಿದೆ ಎಂದರು.
ಕಾಂಗ್ರೆಸ್ ಕಾರ್ಯಕರ್ತರು ಸತ್ಯಮೇವ ಜಯತೆ ಎಂದು ಬರೆದಿರುವ ರಾಹುಲ್ ಭಾವಚಿತ್ರ ಹಿಡಿದು ಸಂಭ್ರಮಿಸಿದರು. ಭಾರತದ ನ್ಯಾಯಾಂಗ ವ್ಯವಸ್ಥೆಗೆ ಜೈಕಾರ ಕೂಗಿ ಸಿಹಿ ವಿತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಗೀತಾ ತಾಂಸಿ, ಆನಂದ ಸಿಂಗನಾಥ, ಸೂರಜ ಗೌಳಿ, ಜೇಮ್ಸ್ ಯಾಮಾ, ಗೌರಮ್ಮ ನಾಡಗೌಡ, ಲಕ್ಷ್ಮೀ ಗುತ್ತೆ, ಬಸಮ್ಮ, ರೋಹನ ಹಿಪ್ಪರಗಿ, ಇಕ್ಬಾಲ್ ತಮಟಗಾರ, ಆನಂದ ಮುಶಣ್ಣವರ, ಮೆಹಬೂಬ ಪಠಾಣ, ಮಹೇಶ ಹುಲ್ಲಣವರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net