ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ

4-kglphoto-1, ()
ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕೊಳ್ಳೇಗಾಲದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಮಂಗಳವಾರ ಕಾರ್ಯಕರ್ತರು ಸಂಭ್ರಮಿಸಿದರು.
Published on

ಕೊಳ್ಳೇಗಾಲ: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಮುಖಂಡ ಪ್ರಭುಸ್ವಾಮಿ ನೇತೃತ್ವದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಕಾಂಗ್ರೆಸ್ ಪರವಾಗಿ ಘೋಷಣೆಗಳನ್ನು ಕೂಗಿದರು. ಈ ವೇಳೆ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು. ನಂತರ, ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರ ಗೆಲುವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಿದರು.

ಮುಖಂಡ ವರದರಾಜು ಮಾತನಾಡಿ, ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಅಭೂತಪೂರ್ವ ಗೆಲುವು ಸಾಧಿಸಿರುವ ಸುನೀಲ್ ಬೋಸ್ ಅವರಿಗೆ ಅಭಿನಂದನೆ ತಿಳಿಸುತ್ತೇವೆ. ಗೆಲುವಿಗೆ ಕಾರಣಕರ್ತರಾದ ಮತದಾರರಿಗೆ ಧನ್ಯವಾದಗಳು ಎಂದರು.
ಸಚಿವ ಎಚ್.ಸಿ.ಮಹದೇವಪ್ಪ ಹಾಗೂ ಸುನೀಲ್ ಬೋಸ್ ಅವರು ಮುಂದೆ ಚಾಮರಾಜನಗರ ಜಿಲ್ಲೆಯಲ್ಲಿ ಆಗಬೇಕಾದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೇವೆ. ಆ ದೇವರು ಅವರಿಗೆ ಶಕ್ತಿ ನೀಡಿ ಜನಪರವಾದ ಅಭಿವೃದ್ಧಿ ಕಾರ್ಯಗಳು ನಡೆಯುವಂತೆ ಆಶೀರ್ವದಿಸಲಿ ಎಂದು ಹೇಳಿದರು.

ಯುವ ಮುಖಂಡ ಡಾ.ಗುರುಮೂರ್ತಿ, ಗ್ರಾಮ ಪಂಚಾಯಿತಿ ಸದಸ್ಯ ಪುರುಷೋತ್ತಮ್, ಮುಖಂಡರಾದ ಹರೀಶ್ ಕಿಜರ್, ಮುರುಗೇಶ್, ಸುದೀಪ್, ಸುರೇಶ್, ಕಿಶೋರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net