

ಹಾನಗಲ್ಲ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಬೆಳಗಾವಿಯಲ್ಲಿ ಡಿ. 27ರಂದು ಗಾಂಧಿ ಭಾರತ ಸಮಾವೇಶ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಅವರ ಜನಸಂಪರ್ಕ ಕಚೇರಿಯಲ್ಲಿ ಡಿ. 20ರಂದು ಸಂಜೆ 4 ಗಂಟೆಗೆ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ ಕುಲಕರ್ಣಿ, ಶಾಸಕ ಶ್ರೀನಿವಾಸ ಮಾನೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಮುಖಂಡ ಆನಂದಸ್ವಾಮಿ ಗಡ್ಡದೇವರಮಠ ಪಾಲ್ಗೊಳ್ಳಲಿದ್ದಾರೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಮಂಜು ಗೊರಣ್ಣನವರ, ನಗರ ಕಾಂಗ್ರೆಸ್ ಅಧ್ಯಕ್ಷ ಮತೀನ್ ಶಿರಬಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.