ಖರ್ಗೆ ಕ್ಷೇತ್ರದ ಅಕ್ರಮ ಮರಳುಗಾರಿಕೆ ಸ್ಥಳ ವೀಕ್ಷಣೆಗೆ ವಿಜಯೇಂದ್ರಗೆ ಕೈ ಕಾರ್ಯಕರ್ತರಿಂದ ಅಡ್ಡಿ

IMG-20250418-WA0010
Published on

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಬಾಗೋಡಿ, ಬೆಳಗುಂಪಿಯಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮರಳುಗಾರಿಕೆಯ ಸ್ಥಳದ ವೀಕ್ಷಣೆಗೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ವೀಕ್ಷಣೆ ಮಾಡಲು ಬಿಡದೆ ಅಡ್ಡಿಪಡಿಸಿದ ಘಟನೆ ನಡೆದಿದೆ.

ಮರಳುಗಾರಿಕೆಯ ಸ್ಥಳದ ವೀಕ್ಷಣೆಗೆ ಆಗಮಿಸಿದ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಪರಿಷತ್ತಿನ ಮುಖ್ಯ ಸಚೇತಕ ಎನ್ ರವಿಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗಮಿಸಿದ ತಕ್ಷಣವೇ ಕಾಂಗ್ರೆಸ್ ನ ಹಲವು ಕಾರ್ಯಕರ್ತರು ದಿಕ್ಕಾರ ಕೂಗಿದ ಘಟನೆ ನಡೆದಿದೆ.

ಕಳೆದ ಸುಮಾರು ದಿನಗಳಿಂದ ಅನಧಿಕೃತವಾಗಿ ಸಾವಿರಾರು ಟಿಪ್ಪರಳಗ ಮೂಲಕ ಮರಳು ಸಾಗಾಣಿಕೆ ಮಾಡುತ್ತಿದ್ದು, ಜಿಲ್ಲಾಡಳಿತ ಹಾಗೂ ಮೈನಿಂಗ್ ಡಿಪಾರ್ಟ್ಮೆಂಟ್ ಸಂಪೂರ್ಣ ಕೈಕಟ್ಟಿ ಕುಳಿತಿದೆ. ಕಲಬುರಗಿ ಜಿಲ್ಲೆಯಾದ್ಯಂತ ಅಕ್ರಮ ಮರಳು ದಂಧೆ ಜೊತೆ ಜೊತೆಗೆ ಗೂಂಡಾ ರಾಜ್ ನಡೆಯುತ್ತಿದೆ ಎಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ವಿವರಿಸಿದರು.

ಜನಾಕ್ರೋಶ ಯಾತ್ರೆ ನಿಮಿತ್ತ ಕಲಬುರಗಿ,ಗೆ ಆಗಮಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಚಿತ್ತಾಪುರ ತಾಲೂಕಿನ ಬಾಗೋಡಿ ಗ್ರಾಮಕ್ಕೆ ಭೇಟಿ ನೀಡಿದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಪರಿಷತ್ತಿನ ಮುಖ್ಯ ಸಚೇತಕ ಎನ್ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಶಾಸಕರಾದ ಬಸವರಾಜ ಮತ್ತಿಮಡು, ಜಿಲ್ಲಾಧ್ಯಕ್ಷ ಅಶೋಕ್ ಬಗಲಿ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಅಕ್ರಮವಾಗಿ ನಡೆಯುತ್ತಿರುವ ಭಾಗೋಡಿಯ ಮರಳುಗಾರಿಕೆ ಸ್ಥಳಕ್ಕೆ ವೀಕ್ಷಣೆಗೆ ತೆರಳಿದಾಗ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net