ಗುಂಡಿಗಳಲ್ಲಿ ಬಾಳೆ ಸಸಿ ನೆಟ್ಟು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Published on

ಹುಬ್ಬಳ್ಳಿ; ಅವಳಿ ನಗರದಲ್ಲಿ ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿಗೊಳಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು ನಗರದ ಕೇಶ್ವಾಪುರದ ಶಾಂತಿನಗರ ಚರ್ಚ್ ಬಳಿ ಗುರುವಾರದಂದು ರಸ್ತೆಗಳ ಗುಂಡಿಗಳಲ್ಲಿ ಬಾಳೆ ಸಸಿ ನೆಟ್ಟು ಪ್ರತಿಭಟಿಸಿದರು. ಮಹಾನಗರ ಪಾಲಿಕೆ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಆದರೂ, ಅವಳಿ ನಗರದ ರಸ್ತೆಗಳಲ್ಲಿನ‌ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು. ಹು-ಧಾ ಸೆಂಟ್ರಲ್ ಕ್ಷೇತ್ರದ ಶಾಸಕರಾದ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ರಸ್ತೆಗಳ ಗುಂಡಿ‌ ಮುಚ್ಚಿ, ವಾಹನಗಳ ಸುಗಮ ಸಂಚಾರಕ್ಕೆ ಆಸಕ್ತಿ ತೋರುತ್ತಿಲ್ಲ ಎಂದು ದೂರಿದರು. ಕಾಂಗ್ರೆಸ್ ಮುಖಂಡ ರಜತ ಉಳ್ಳಾಗಡ್ಡಿಮಠ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹೂವಪ್ಪ ದಾಯಗೋಡಿ, ಅಶೋಕ ಕಲಾದಗಿ, ಕಾಶೀಮ ಕೂಡಲಗಿ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net