ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Congress workers protest Mandya
Published on

ಮಂಡ್ಯ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸರ್‌ಎಂ.ವಿ ಪ್ರತಿಮೆ ಎದುರು ಜಮಾಯಿಸಿದ ಕಾರ್ಯಕರ್ತರು, ರಾಜ್ಯಪಾಲರು ಹಾಗೂ ಮೈತ್ರಿ ಪಕ್ಷಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಳಂಕ ರಹಿತವಾಗಿ ಸಿದ್ದರಾಮಯ್ಯ ಅವರ ಮೇಲೆ ಮಾಡಿರುವ ಆರೋಪಗಳನ್ನು ಜನರು ಒಪ್ಪುವುದಿಲ್ಲ. ಪ್ರಜಾಪ್ರಭುತ್ವದಡಿ ಚುನಾಯಿತರಾದ ಸರ್ಕಾರವನ್ನು ಹೇಗಾದರೂ ಮಾಡಿ ಅಸ್ಥಿರಗೊಳಿಸಬೇಕೆಂದು ಮೈತ್ರಿ ಪಕ್ಷಗಳು ಹಠತೊಟ್ಟು ನಿಂತಿವೆ ಎಂದು ಆರೋಪಿಸಿದರು.

ಮೈಸೂರಿನ ಮುಡಾದಲ್ಲಿ ನಡೆದಿರುವುದು ಹಗರಣವೆಂದು ಒಪ್ಪಿಕೊಳ್ಳುವುದಾದರೆ, ಮಾಜಿ ಸಿಎಂಗಳಾದ ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜು ಬೊಮ್ಮಾಯಿ ಅವರ ಮೇಲೆ ಮೊದಲು ಪ್ರಾಸಿಕ್ಯೂಷನ್‌ಗೆ ಅವಕಾಶ ನೀಡಬೇಕು. ಅಂದು ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಅದನ್ನು ಮರೆತು ಈಗ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸುವ ಪಿತೂರಿಯನ್ನು ಯಾರೂ ಒಪ್ಪುವುದಿಲ್ಲ ಎಂದು ಕಿಡಿಕಾರಿದರು.

ಶಾಸಕ ರಮೇಶ ಬಂಡಿಸಿದ್ದೇಗೌಡ, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ, ಎಲ್.ಸಂದೇಶ್, ಎಂ.ಎಸ್.ಚಿದಂಬರ್, ಸುರೇಶ್, ಸಿ.ಎಂ.ದ್ಯಾವಪ್ಪ, ನಾಗರಾಜು, ಶ್ರೀಧರ್, ಶಿವಪ್ರಕಾಶ್, ವಿಜಯಲಕ್ಷ್ಮೀ ರಘುನಂದನ್, ಮಂಜುನಾಥ್, ಅಮ್ಜದ್ ಪಾಷಾ, ಅಂಜನಾ ಶ್ರೀಕಾಂತ್, ರುದ್ರಪ್ಪ, ದೊಡ್ಡಯ್ಯ, ಸೋಮಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net