ಎಲ್ಲ ಜನಾಂಗದ ಅಭಿವೃದ್ಧಿಗೆ ಕಾಂಗ್ರೆಸ್ ಶ್ರಮ

29 nrp 3
ಎನ್.ಆರ್.ಪುರದಲ್ಲಿ ನಡೆದ 139ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ದ್ವಜಾರೋಹಣ ನೆರವೇರಿಸಲಾಯಿತು.
Published on

ಎನ್.ಆರ್.ಪುರ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ದೇಶದ ಸರ್ವ ಜನಾಂಗದ ಅಭಿವೃದ್ಧಿಗೆ ಶ್ರಮಿಸಿದೆ ಎಂದು ಬ್ಲಾಕ್ ಕಾಂಗ್ರೆಸ್‌ನ ಐಟಿ ಸೆಲ್‌ನ ಅಧ್ಯಕ್ಷ ನೆಲಗದ್ದೆಕಿರಣ್ ತಿಳಿಸಿದರು.
ಶೆಟ್ಟಿಕೊಪ್ಪದ ಕಡಹಿನಬೈಲು ಗ್ರಾಪಂ ವ್ಯಾಪ್ತಿಯ ಬೂತ್ ಅಧ್ಯಕ್ಷ ಅಬ್ದುಲ್ ರೆಹಮಾನ್ ಮನೆಯಂಗಳದಲ್ಲಿ 139 ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ದ್ವಜಾರೋಹಣ ನೆರವೇರಿಸಿ ಮಾತನಾಡಿ, ಕಾಂಗ್ರೆಸ್‌ಗೆ ತನ್ನದೇ ಆದ ಇತಿಹಾಸವಿದೆ. ಸ್ವಾತಂತ್ರ ಸಂಗ್ರಾಮದಲ್ಲಿ ಹೋರಾಡಿ ಸ್ವಾತಂತ್ರ್ಯತಂದು ಕೊಡುವಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪ್ರಮುಖ ಪಾತ್ರ ವಹಿಸಿದೆ. ಸ್ವಾತಂತ್ರ ನಂತರದ ದಿನಗಳಲ್ಲಿ ಸಕ್ರಿಯ ರಾಜಕಾರಣದಲ್ಲೂ ಕಾಂಗ್ರೆಸ್ ಜನಪರ ಕಾರ್ಯಕ್ರಮಗಳನ್ನು ರೂಪಿಸಿ ದೇಶದ ಅಭಿವೃದ್ಧಿ ಗೆ ವಿಶೇಷ ಕೊಡುಗೆ ನೀಡಿದೆ. ಜವಹಾರ್ ಲಾಲ್ ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ,ಪಿ.ವಿ.ನರಸಿಂಹರಾವ್ ಮನಮೋಹನ್ ಸಿಂಗ್ ಅವರು ಈ ದೇಶದ ಪ್ರಧಾನಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದರು.
ಕಡಹಿನಬೈಲು ಪಂಚಾಯಿತಿ ಮಟ್ಟದ ಕಾಂಗ್ರೆಸ್ ಅಧ್ಯಕ್ಷ ಭೀಮನರಿ ಪ್ರಶಾಂತ್ ಮಾತನಾಡಿ, ಕಾಂಗ್ರೆಸ್ ಪಕ್ಷವು ಜಾತ್ಯಾತೀತ ನಿಲುವನ್ನು ಹೊಂದಿದೆ. ದೇಶದ ಅಭವೃದ್ಧಿಗೆ ವಿಶೇಷ ಕೊಡುಗೆ ನೀಡಿದೆ ಎಂದರು.
ಕಡಹಿನಬೈಲು ಬೂತ್ ಅಧ್ಯಕ್ಷ ಅಬ್ದುಲ್ ರೆಹಮಾನ್ ಮಾತನಾಡಿ, ಕಾಂಗ್ರೆಸ್ ಪಕ್ಷ ಅಲ್ಪ ಸಂಖ್ಯಾತರಿಗೆ ರಕ್ಷಣೆ ನೀಡಿ ಅವರ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿದೆ. ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸುವ ಶಕ್ತಿ ಇದ್ದರೆ ಅದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದರು.
ಕಾಂಗ್ರೆಸ್ ಮುಖಂಡರಾದ ಬೆಸಿಲ್, ಸುಲೇಮಾನ್, ಸಿನೋಯಿ, ಪಿ.ಮಂಜುನಾಥ್, ಲಿಂಗಪ್ಪ, ಶೆಟ್ಟಿಕೊಪ್ಪ ಮಹೇಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net