ಇಂಧನ ದರ ಏರಿಸಿ ಕಾಂಗ್ರೆಸ್‌ನಿಂದ ಜನಸಾಮನ್ಯರಿಗೆ ಬರೆ

mng_16 jun capt BRIJESH CHOWTA
ಕ್ಯಾಪ್ಟನ್ ಬ್ರಿಜೇಶ್ ಚೌಟ
Published on

ಮಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಸಾಮಾನ್ಯರ ಜನರ ಬದುಕನ್ನು ಕಸಿದುಕೊಳ್ಳುತ್ತಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿರುವ ಕಾಂಗ್ರೆಸ್ ಸರ್ಕಾರ ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳಿಗೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ಸರಿದೂಗಿಸಲು ಹೆಣಗಾಡುತ್ತಿದೆ. ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತಲಾ ಮೂರು ರೂ ಹೆಚ್ಚಳ ಮಾಡಲಾಗಿದ್ದು, ಒಮ್ಮೆಲೇ ಅತೀ ಹೆಚ್ಚು ಮಾರಾಟ ತೆರಿಗೆ ಇದಾಗಿದೆ, ಚುನಾವಣೆ ಮುಗಿಯುತ್ತಿದ್ದಂತೆ ಪೆಟ್ರೋಲ್ ದರ ಏರಿಸಿರುವ ಕ್ರಮ ಖಂಡನೀಯ ಎಂದರು.

ಜನಸಾಮಾನ್ಯರ ಹಿತದೃಷ್ಟಿಯಿಂದ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಇಳಿಕೆ ಮಾಡಬೇಕೆಂದು ರಾಜ್ಯ ಸರ್ಕಾರವನ್ನು ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net