

ಹುಬ್ಬಳ್ಳಿ : ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ನಾರಾಯಣ ಬರಮನಿ ಮೇಲೆ ಕೈ ಎತ್ತಿರುವುದನ್ನು ಶಾಸಕ ಮಹೇಶ ಟೆಂಗಿನಕಾಯಿ ಖಂಡಿಸಿದ್ದಾರೆ.
ಒಬ್ಬ ಜನಪ್ರತಿನಿಧಿಯಾಗಿ ತಾಳ್ಮೆ ಕಳೆದುಕೊಳ್ಳುವುದು ಸರಿಯಲ್ಲ. ಕಾಂಗ್ರೆಸ್ನವರಿಗೆ ಅಧಿಕಾರದ ಮದ ನೆತ್ತಿಗೆ ಏರಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಪೊಲೀಸರು ಸೇರಿ ಇತರ ಸರ್ಕಾರಿ ಅಧಿಕಾರಿಗಳ ಮೇಲೆ ಮುಖ್ಯಮಂತ್ರಿ, ಸಚಿವರು, ಆ ಪಕ್ಷದ ಶಾಸಕರು ದರ್ಪ ತೋರುವುದು ಹೆಚ್ಚಿದೆ. ಸರ್ಕಾರಿ ಅಧಿಕಾರಿಗಳಿಗೆ ಗೌರವ ನೀಡುತ್ತಿಲ್ಲ. ಮಹಿಳಾ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರು ಸಹ ಪೊಲೀಸರ ಮೇಲೆ ದರ್ಪ ತೋರಿದ್ದಾರೆ ಎಂದು ದೂರಿದ್ದಾರೆ.