ಬಿಜೆಪಿ ಪ್ರತಿಭಟನೆ ವಿರುದ್ಧ ಕಾಂಗ್ರೆಸ್‌ನಿಂದ ಸತ್ಯದರ್ಶನ

gan (3)
Published on

ವಿಜಯವಾಣಿ ಸುದ್ದಿಜಾಲ ಕುಂದಾಪುರ

ನಗರದಲ್ಲಿ ಪಾರ್ಕಿಂಗ್ ವ್ಯವಸ್ಥೆ, ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಯುಜಿಡಿ ಯೋಜನೆಯಂತಹ ಅನೇಕ ಸಮಸ್ಯೆ ಜನರನ್ನು ಕಾಡುತ್ತಿರುವಾಗ ಬಿಜೆಪಿಯವರು ಅದನ್ನೆಲ್ಲ ಬಿಟ್ಟು ಯಾವುದೋ ಸುಳ್ಳು ಹೇಳಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಅಪಪ್ರಚಾರ ಮಾಡಿದರು. ಬಿಜೆೆಪಿಯವರು ಹೇಳಿದ ಸುಳ್ಳಿನ ಸತ್ಯಾಂಶ ಹೇಳಲು ಕಾಂಗ್ರೆಸ್ ಸತ್ಯದರ್ಶನ ಪ್ರತಿಭಟನೆ ನಡೆಸುತ್ತಿದೆ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೊ ಹೇಳಿದರು.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪುರಸಭೆ ಮುಂಭಾಗ ಬುಧವಾರ, ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಸತ್ಯದರ್ಶನ ಪ್ರತಿಭಟನೆಯಲ್ಲಿ ವಾತನಾಡಿದರು.

ಆನಗಳ್ಳಿ ಗ್ರಾಪಂ ಎದುರು ನಡೆದ ಪ್ರತಿಭಟನೆಯಲ್ಲಿ ವಾತನಾಡಿದ ಕಾಂಗ್ರೆಸ್ ಮುಖಂಡ ದಿನೇಶ ಹೆಗ್ಡೆ ಮೊಳಹಳ್ಳಿ, 2021ರಲ್ಲಿ ಬಿಜೆಪಿಯವರೇ 9/11 ತಂದ ನೀತಿಯಿಂದ ಹಳ್ಳಿಗಳಲ್ಲಿ ಬಹಳಷ್ಟು ಸಮಸ್ಯೆಯಾಗಿದೆ. ಈ ಬಗ್ಗೆ ಪಕ್ಷದ ಹಿರಿಯ ಮುಖಂಡರ ಜತೆಗೆ ಚರ್ಚೆ ನಡೆಸಲಾಗಿದ್ದು, ವಾರದೊಳಗೆ ಮುಖ್ಯಮಂತ್ರಿಗಳ ಜತೆ ವಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವ ಪ್ರಯತ್ನ ನಡೆಸಲಾಗುವುದು ಎಂದರು.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಜಿಲ್ಲಾ ವಕ್ತಾರ ವಿಕಾಸ್ ಹೆಗ್ಡೆ ಬಸ್ರೂರು, ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಭಿಜಿತ್ ಪೂಜಾರಿ ಹೇರಿಕುದ್ರು, ಕುಂದಾಪುರ ಪುರಸಭೆ ಸದಸ್ಯರಾದ ಚಂದ್ರಶೇಖರ ಖಾರ್ವಿ, ಶ್ರೀಧರ ಶೇರುಗಾರ್, ಅಶ್ಫಕ್ ಕೋಡಿ, ಪ್ರಭಾವತಿ ಶೆಟ್ಟಿ, ಆನಗಳ್ಳಿ ಗ್ರಾ.ಪಂ. ಅಧ್ಯಕ್ಷೆ ಸವಿತಾ ಬಿಲ್ಲವ, ಉಪಾಧ್ಯಕ್ಷರಾದ ದಯ ಪೂಜಾರಿ, ಪ್ರಭಾಕರ ಬಂಗೇರ, ಗೀತಾ ಎಸ್., ಜೋಸೆಫ್ ರೆಬೆಲ್ಲೊ, ಜೋಯ್ಸನ್ ಡಿಸೋಜ, ಸತೀಶ್ ಮೊಗವೀರ, ನಾಮನಿರ್ದೇಶಿತ ಸದಸ್ಯರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಎರಡು ಕಂತುಗಳಲ್ಲಿ ಬರುವ ರಾಜೀವ ಗಾಂಧಿ ಅಭಿವೃದ್ಧಿ ನಿಗಮದ ಹಣ ಪ್ರತಿ ಅವಧಿಯಲ್ಲಿ ಬರುತ್ತಿದೆ. ಆದರೆ ಕೇಂದ್ರ ಸರ್ಕಾರದ ದುಡ್ಡು ಬರುತ್ತಿಲ್ಲ. ಸಿದ್ದರಾಮಯ್ಯ ಸರ್ಕಾರ ಬಂದ ಬಳಿಕ ಕುಂದಾಪುರ ತಾಲೂಕು ಆಸ್ಪತ್ರೆಗೆ ಎಂಟು ಡಯಾಲಿಸಿಸ್ ಯಂತ್ರ ಬಂದಿವೆ. 80 ರೋಗಿಗಳಿಗೆ ಉಚಿತವಾಗಿ ಡಯಾಲಿಸಿಸ್ ಚಿಕಿತ್ಸೆ ನೀಡಲಾಗುತ್ತಿದೆ. 40 ಲಕ್ಷ ರೂ. ಅನುದಾನದಲ್ಲಿ ಪ್ರಯೋಗಾಲಯ ಆಧುನೀಕರಣ, ಎಸ್‌ಟಿಪಿ ಯೋಜನೆಗೆ 20 ಲಕ್ಷ ರೂ. ಅನುದಾನ ಬಂದಿದೆ. ವಿನೋದ್ ಕ್ರಾಸ್ಟೊ, ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net