ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

27raju3
Published on

ಚಾಮರಾಜನಗರ: ಎಐಸಿಸಿ ಅಧ್ಯಕ್ಷರಾಗಿ ಎಂ.ಮಲ್ಲಿಕಾರ್ಜುನ ಖರ್ಗೆ ಅಧಿಕಾರಿ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲೂಕಿನ ದೊಡ್ಡರಾಯಪೇಟೆಯಲ್ಲಿ ಬುಧವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು.


ದೊಡ್ಡರಾಯಪೇಟೆ ಕ್ರಾಸ್‌ನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಭಾವಚಿತ್ರಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಪುಷ್ಪಾರ್ಚನೆ ಮಾಡಿ, ಗಿಡ ನೆಟ್ಟು ಸಿಹಿ ಹಂಚಿದರು. ಕಾರ್ಯಕರ್ತರು ಮತ್ತು ಮುಖಂಡರು ಖರ್ಗೆ, ಕಾಂಗ್ರೆಸ್ ಪರ ಜೈಕಾರ ಕೂಗಿ ಸಂಭ್ರಮಿಸಿದರು. ಚುನಾವಣೆಯಲ್ಲಿ ಹೆಚ್ಚು ಮತ ಪಡೆದು ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವುದು ಸಂತಸ ಉಂಟು ಮಾಡಿದೆ ಎಂದರು.


ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಅರುಣ್‌ಕುಮಾರ್, ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ತಾಲೂಕು ಅಧ್ಯಕ್ಷ ಸಿದ್ದರಾಜು, ಗ್ರಾ.ಪಂ. ಸದಸ್ಯ ಬಸಮ್ಮಣಿ, ಮಾಜಿ ಸದಸ್ಯ ಮೂರ್ತಿ, ಮುಖಂಡರಾದ ರವಿಗೌಡ, ಜೋಸೆಫ್, ಬಸವರಾಜು, ಅಂಗಡಿರಾಜು, ಪುಟ್ಟಸ್ವಾಮಿ, ಪುರುಷೋತ್ತಮ್, ನಾಗರಾಜು, ಶಿವಶಂಕರ್, ಪ್ರಕಾಶ್, ಶ್ರೀನಿವಾಸ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net