

ಚಾಮರಾಜನಗರ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ದಿಲ್ಲಿಯ ವಿಜಯ್ ಚೌಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಭುವನೇಶ್ವರಿ ವೃತ್ತದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಬ್ದುಲ್ ಅಜೀಜ್ ಅವರ ನೇತೃತ್ವದಲ್ಲಿ ಜಮಾಯಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಪ್ರಧಾನಿ ನರೇಂದ್ರಮೋದಿ, ಅಮಿತ್ ಶಾ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಎಚ್.ಎಂ.ಮಧು, ಪ್ರಧಾನ ಕಾರ್ಯದರ್ಶಿ ಯೋಗೇಂದ್ರ, ಶ್ರೀನಿವಾಸ್, ಚಂದನ್, ಸೋಮೇಶ್, ಸಾಧಿಕ್, ಕೊಳ್ಳೇಗಾಲ ಬ್ಲಾಕ್ ಅಧ್ಯಕ್ಷ ವರುಣ್ ಕುಮಾರ್, ಸಂತೋಷ್, ವೆಂಕಟೇಶ್, ರಾಜೇಂದ್ರ, ಮಹದೇವಪ್ರಸಾದ್, ಫರ್ದಿನ್ ಇತರರು ಭಾಗವಹಿಸಿದ್ದರು.