ಹೈಕಮಾಂಡ್‌ನಿಂದ ಒಮ್ಮತದ ನಾಯಕ ಆಯ್ಕೆ

Sriramulu
Published on

ಗಜೇಂದ್ರಗಡ: ಯಡಿಯೂರಪ್ಪ ಪ್ರಶ್ನಾತೀತ ನಾಯಕ. ಅವರ ನೇತೃತ್ವದಲ್ಲಿ ರಾಜ್ಯಾಧ್ಯಕ್ಷರನ್ನು ಹೈಕಮಾಂಡ್ ಆಯ್ಕೆ ಮಾಡಿದರೆ ಸ್ವಾಗತಿಸುತ್ತೇವೆ ಎಂದ ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 2028ರ ಚುನಾವಣೆ ಅಂಗವಾಗಿ ಪಕ್ಷ ಸಂಘಟನೆಗೆ ಮುಂದಾಗುತ್ತಿದ್ದೇನೆ. ರಾಜ್ಯಾಧ್ಯಕ್ಷರಾಗಿ ಯತ್ನಾಳ, ಅಶೋಕ ಅಥವಾ ನಾನು ಆಯ್ಕೆಯಾಗಬೇಕು ಎಂಬುದು ಕಾರ್ಯಕರ್ತರ ಆಶಯವಾಗಿದೆ. ಕೆಲವೇ ದಿನಗಳಲ್ಲಿ ಒಮ್ಮತದ ನಾಯಕನನ್ನು ಹೈಕಮಾಂಡ್ ಆಯ್ಕೆ ಮಾಡಲಿದೆ ಎಂದರು.

ಬೊಮ್ಮಾಯಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಅಂತಿಮ ಎನ್ನುವ ಪ್ರಶ್ನೆಗೆ ಅಂತಹ ಯಾವುದೇ ಮಾಹಿತಿ ಇಲ್ಲ ಎಂದರು.

ದೆಹಲಿ ಸೇರಿ ದೇಶದಲ್ಲಿ ನಡೆಯುವ ಚುನಾವಣೆಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪ್ರಧಾನಿ ಮೋದಿ ಅವರು ಶ್ರಮಿಸುತ್ತಿದ್ದಾರೆ. ರಾಷ್ಟ್ರ ರಾಜ್ಯಧಾನಿ ದೆಹಲಿಯ ಅಧಿಕಾರ ಗದ್ದುಗೆ ಬಿಜೆಪಿಗೆ ಸಿಗಲಿದೆ ಎಂದು ಸಮೀಕ್ಷೆಗಗಳಿಂದ ಗೊತ್ತಾಗಿದೆ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳ ಮೂಲಕ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿ ರಾಜ್ಯ ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳನ್ನು ಮರೆತಿದೆ ಎಂದರು.

ರಾಜಕಾರಣದಲ್ಲಿ ಸ್ನೇಹವನ್ನು ಬೆರಸಲ್ಲ ಎಂದ ಅವರು ಜನಾರ್ದನರೆಡ್ಡಿ ಕುರಿತು ಮಾತನಾಡಲು ನಿರಾಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net