ದೇಹ ದಾನ ಮಾಡಲು ಒಪ್ಪಿಗೆ: ಮಿಮ್ಸ್‌ಗೆ ಒಪ್ಪಿಗೆ ಪತ್ರ ಸಲ್ಲಿಸಿದ ಮುಖಂಡರು

Consent to body donation Mandya
Published on

ಮಂಡ್ಯ: ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯಲ್ಲಿ ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಒಂಭತ್ತು ಜನ ಮುಖಂಡರು ದೇಹ ಹಾಗೂ ಅಂಗಾಂಗ ದಾನ ಮಾಡಲು ಒಪ್ಪಿಗೆ ನೀಡಿದರು.

ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ದೇವಿ, ಜಿಲ್ಲಾ ಕಾರ್ಯದರ್ಶಿ ಸುಶೀಲಾ, ಮಳವಳ್ಳಿ ತಾಲೂಕು ಅಧ್ಯಕ್ಷೆ ಮಂಜುಳಾ, ಕರ್ನಾಟಕ ಪ್ರಾಂತ ರೈತ ಸಂಘಟನೆ ಮಳವಳ್ಳಿ ತಾಲೂಕು ಅಧ್ಯಕ್ಷ ಎನ್.ಎಲ್.ಭರತ್‌ರಾಜ್, ತಾಲೂಕು ಕಾರ್ಯದರ್ಶಿ ಎನ್.ಲಿಂಗರಾಜಮೂರ್ತಿ, ತಾಲೂಕು ಪದಾಧಿಕಾರಿ ಗುರುಸ್ವಾಮಿ, ಸಿಐಟಿಯು ಸಂಘಟನೆಯ ಎಚ್.ಕೆ.ತಿಮ್ಮೇಗೌಡ, ಜಿ.ರಾಮಕೃಷ್ಣ, ಮಹದೇವಮ್ಮ ಅರ್ಜಿ ಸಲ್ಲಿಸಿದರು. ಮಿಮ್ಸ್‌ನ ಅಂಗರಚನಾಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ತ್ರಿನೇಶ್‌ಗೌಡ ಅರ್ಜಿ ಸ್ವೀಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net