

ರಾಯಚೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್‌ನಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ಮೀಸಲಿಡುವ ಮೂಲಕ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕ ಒತ್ತಾಯಿಸಿದೆ.
ಪಕ್ಷದ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಬುಧವಾರ ಮನವಿ ಸಲ್ಲಿಸಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಬೇಕು. ಜನರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಭರವಸೆ ನೀಡಿದಂತೆ ಐದು ಗ್ಯಾರಂಟಿಗಳನ್ನು ಈಡೇರಿಸಿರುವುದು ಸ್ವಾಗತಾರ್ಹವಾಗಿದೆ. ದೆಹಲಿ ಮತ್ತು ಪಂಜಾಬ್‌ನಲ್ಲಿ ಆಮ್‌ಆದ್ಮಿ ಸರ್ಕಾರ ನೀಡುತ್ತಿರುವಂತೆ ಜನರಿಗೆ ಉಚಿತ ಶಿಕ್ಷಣ, ವೈದ್ಯಕೀಯ ಸೇವೆಗಳನ್ನು ನೀಡಲು ಬಜೆಟ್‌ನಲ್ಲಿ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಡಿ.ವೀರೇಶಕುಮಾರ, ಪದಾಕಾರಿಗಳಾದ ಮಕ್ಬೂಲ್, ನೂಸ್ರತ್ ಅಲಿ, ವೀರೇಶ, ಮಹೆಬೂಬ್ ಪಾಷಾ, ಸೀರಾಜ್ ಇದ್ದರು.