ಕಸ್ತೂರಿ ರಂಗನ್ ವರದಿಯಲ್ಲಿ ಅಭಿವೃದ್ಧಿಗೆ ಪೂರಕ ಅಂಶ ಪರಿಗಣಿಸಿ; ಸಿ.ಪಿ.ಮುತ್ತಣ್ಣ

03edd00f-509c-4093-8797-cdf7662000ee
Published on

ಮಡಿಕೇರಿ: ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ಕೈಬಿಡದೆ ಅದರಲ್ಲಿ ಅಭಿವೃದ್ಧಿಗೆ ಪೂರಕವಾಗಿರುವ ಅಂಶಗಳನ್ನು ಪರಿಗಣಿಸುವಂತೆ ಕೂರ್ಗ್ ವೈಲ್ಡ್ ಲೈಫ್ ಸೊಸೈಟಿಯ ಮಾಜಿ ಅಧ್ಯಕ್ಷ ಹಾಗೂ ಪರಿಸರ ಮತ್ತು ಆರೋಗ್ಯ ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಸಿ.ಪಿ.ಮುತ್ತಣ್ಣ ಒತ್ತಾಯಿಸಿದರು.


ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಸಮಿತಿ ರಚಿಸಲಾಗಿದ್ದು, ಭೌತಿಕ ಸರ್ವೆ ನಡೆಸಿ ಒಂದು ವರ್ಷದೊಳಗೆ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ತಜ್ಞರ ಸಮಿತಿ ಪಶ್ಚಿಮ ಘಟ್ಟದ ಪ್ರತಿ ಹಳ್ಳಿಗೂ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸುವವರೆಗೂ ಇಎಸ್‌ಎ(ಪರಿಸರ ಸೂಕ್ಷ್ಮ ಪ್ರದೇಶ) ಅಧಿಸೂಚನೆಯನ್ನು ತಡೆಹಿಡಿಯಲು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯದ ಸಚಿವರು ಒಪ್ಪಿದ್ದಾರೆ. ಕೇಂದ್ರ ಸರ್ಕಾರದ ಅಧಿಸೂಚನೆಯು ೨೨೮ ಪುಟಗಳನ್ನು ಹೊಂದಿದ್ದು, ಅದರಲ್ಲಿ ಯಾವ ವಿಚಾರವನ್ನು ಯಾವ ಕಾರಣಕ್ಕಾಗಿ ರಾಜ್ಯ ಸರ್ಕಾರ ಆಕ್ಷೇಪಿಸುತ್ತಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಲಿ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಎಂದರು.


ಸುದ್ದಿಗೋಷ್ಠಿಯಲ್ಲಿ ಕಾವೇರಿ ಸೇನೆ ಅಧ್ಯಕ್ಷ ರವಿ ಚಂಗಪ್ಪ, ಮುಕ್ಕೋಡ್ಲು ಗ್ರಾಮಸ್ಥ ಹಂಚೆಟ್ಟಿರ ಮನು ಮುದ್ದಪ್ಪ, ಪ್ರಮುಖರಾದ ಶಾನ್ ಬೋಪಯ್ಯ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net