

ಕೊಪ್ಪಳ:ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಸಂವಿಧಾನ ಪೀಠಿಕೆ ಸಾಮೂಕ ವಾಚನ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಸಂಸದ ಸಂಗಣ್ಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಿಸಿ ನಲಿನ್ ಅತುಲ್ ಸಂವಿಧಾನ ಪೂರ್ವ ಪೀಠಿಕೆ ಬೋಧಿಸಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಹಾಗೂ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು.
ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಎಡಿಸಿ ಸಾವಿತ್ರಿ ಕಡಿ, ಎಸಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಡಿವೈಎಸ್ಪಿ ಶರಣಪ್ಪ ಸುಬೇದಾರ, ಜಿಪಂುಪ ಕಾರ್ಯದರ್ಶಿ ಮಲ್ಲಪ್ಪ ತೊದಲಬಾಗಿ, ಡಿಡಿಪಿಐ ಎಸ್.ಎಸ್.ಬಿರಾದಾರ, ನಗರ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಜನರು, ನಾಗರಿಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗಿಯಾಗಿದ್ದರು.
ಭಾರತ್ ಸ್ಕೌಟ್ ಗೈಡ್ಸ್: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಮತ್ತು ಜಿಲ್ಲಾ ತರಬೇತಿ ಕೇಂದ್ರದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು. ಸ್ಕೌಟ್ ಜಿಲ್ಲಾ ತರಬೇತಿ ಆಯುಕ್ತ ಶ್ರೀಕಾಂತ ಮಾಸಗಟ್ಟಿ ಸಂವಿಧಾನ ಪೂರ್ವ ಪೀಠಿಕೆ ಬೋಧಿಸಿದರು. ವಿವಿಧ ಶಾಲಾ-ಕಾಲೇಜುಗಳ ಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್ 120 ಜನ ವಿದ್ಯಾರ್ಥಿಗಳು ಹಾಗೂ ಸ್ಕೌಟರ್-ಗೈಡರ್ ಹಾಗೂ ಜಿಲ್ಲಾ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆ ಪದಾಧಿಕಾರಿಗಳು ಉಪ ಸ್ಥಿತರಿದ್ದರು.