ಡಿ.ಸುಧಾಕರ್ ವಿರುದ್ಧ ಷಡ್ಯಂತ್ರ

DR B THIPPESWAMY congress
Published on

ಹೊಳಲ್ಕೆರೆ: ಸಚಿವ ಡಿ.ಸುಧಾಕರ್ ಅವರ ವಿರುದ್ಧ ದಾಖಲಿಸಿರುವ ಜಾತಿನಿಂದನೆ ದೂರನ್ನು ರದ್ದುಗೊಳಿಸಬೇಕು ಎಂದು ಕೆಪಿಸಿಸಿ ಸದಸ್ಯ, ದಲಿತ ಮುಖಂಡ ಡಾ.ಬಿ.ತಿಪ್ಪೇಸ್ವಾಮಿ ಜೆ.ಜೆ.ಹಟ್ಟಿ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಧಾಕರ್ ದಲಿತರ ಮೇಲೆ ಹೆಚ್ಚು ಅಭಿಮಾನ ಹೊಂದಿದ್ದಾರೆ. ಅವರು ಅಲ್ಪಸಂಖ್ಯಾತರಾದರೂ ಎಲ್ಲ ವರ್ಗದ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಈ ಕಾರಣಕ್ಕೆ ಚಳ್ಳಕೆರೆ-ಹಿರಿಯೂರು ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಾಗಿರುವುದು ಎಂದು ಹೇಳಿದರು.

ಹಿಂದಿನಿಂದಲೂ ಪರಿಶಿಷ್ಟ್ಟರ ಕುರಿತು ಹೆಚ್ಚು ಕಾಳಜಿ ಹೊಂದಿದ್ದಾರೆ. ದಲಿತ, ಹಿಂದುಳಿದ ಸೇರಿ ಎಲ್ಲ ವರ್ಗದ ಪ್ರಗತಿಗೆ ಶ್ರಮಿಸಿದ್ದಾರೆ. ಇಂಥವರ ವಿರುದ್ಧ ಸುಳ್ಳು ದೂರು ದಾಖಲಿಸಿರುವುದು ಸರಿಯಲ್ಲ ಎಂದು ತಿಳಿಸಿದರು.

ಹಿಂದಿನಿಂದಲೂ ಮಾದಿಗ ಸಮುದಾಯ ಸುಧಾಕರ್ ಪರವಾಗಿ ನಿಂತಿದೆ. ಪ್ರತಿ ಬಾರಿಯೂ ಅವರಿಗೆ ರಾಜಕೀಯ ಶಕ್ತಿ ನೀಡಿದೆ. ಪರಿಶಿಷ್ಟರ ಶ್ರೇಯೋಭಿವೃದ್ಧಿ ಬಯಸುವ ಸುಧಾಕರ್ ವಿರುದ್ಧ ದಾಖಲಾಗಿರುವ ದೂರು ತಕ್ಷಣ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net