

ಕಲಬುರಗಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಸಶಸ್ತç ಪೊಲೀಸ್ ಕಾನ್ಸ್ಟೇಬಲ್ ೩೦೬೪ ಹುದ್ದೆಗೆ ಸಂಬAಧಿಸಿದAತೆ ಲಿಖಿತ ಪರೀಕ್ಷೆಯನ್ನು ಜ.೨೮ರಂದು ಬೆಳಗ್ಗೆ ೧೧ರಿಂದ ಮಧ್ಯಾಹ್ನ ೧೨.೩೦ರವರೆಗೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಚೇತನ್ ಆರ್. ತಿಳಿಸಿದ್ದಾರೆ. ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಎಸ್.ಎಂ.ಎಸ್ ಮೂಲಕ ಮಾಹಿತಿ ನೀಡಲಾಗುತ್ತದೆ. ಕರೆಪತ್ರದ ಲಿಂಕ್ ಅನ್ನು ಕಳುಹಿಸಲಾಗುತ್ತದೆ. ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದAದು ಲಿಖಿತ ಪರೀಕ್ಷೆಗೆ ಹಾಜರಾಗಬೇಕು ಎಂದು ತಿಳಿಸಿದ್ದಾರೆ.