ನೇಣುಬಿಗಿದುಕೊಂಡು ಕಾನ್‌ಸ್ಟೆಬಲ್ ಆತ್ಮಹತ್ಯೆ

somashekar
Published on

ಸಕಲೇಶಪುರ: ಕೌಟುಂಬಿಕ ಕಲಹದಿಂದ ಬೇಸತ್ತು ಪೊಲೀಸ್ ಕಾನ್‌ಸ್ಟೆಬಲ್ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 112 ವಾಹನ ಚಾಲಕ ಸೋಮಶೇಖರ್ (38) ಆತ್ಮಹತ್ಯೆ ಮಾಡಿಕೊಂಡವರು. ಪತಿ, ಪತ್ನಿ ನಡುವೆ ಸಾಮರಸ್ಯದ ಕೊರತೆಯಿಂದಾಗಿ ಪತಿ ವಿರುದ್ಧ್ದ ಪತ್ನಿ ಹಾಸನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆ, ಮತ್ತೆ ಪಟ್ಟಣದ ಡಿವೈಎಸ್‌ಪಿ ಕಚೇರಿಯಲ್ಲಿ ಪತ್ನಿ ಬೆದರಿಕೆ ದೂರು ದಾಖಲಿಸಿದ್ದರು. ಇದರಿಂದ ಮನನೊಂದಿದ್ದ ಸೋಮಶೇಖರ್ ಗುರುವಾರ ರಾತ್ರಿ ಪೊಲೀಸ್ ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾರೆ. ಆಲೂರು ತಾಲೂಕು ಅಂತನಮನೆ ಗ್ರಾಮದಲ್ಲಿ ಶುಕ್ರವಾರ ಅಂತ್ಯಸಂಸ್ಕಾರ ನಡೆಸಲಾಯಿತು. ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net