ಅಪಘಾತದಲ್ಲಿ ಕಾನ್‌ಸ್ಟೇಬಲ್ ಸಾವು

WhatsApp Image 2023-09-21 at 12.51.06 PM
Published on

ಧಾರವಾಡ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಕಾನ್‌ಸ್ಟೇಬಲ್ ಮೃತಪಟ್ಟು, ಮಹಿಳಾ ಸಿಬ್ಬಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ರಮ್ಯಾ ರೆಸಿಡೆನ್ಸಿ ಬಳಿ ಬುಧವಾರ ರಾತ್ರಿ ನಡೆದಿದೆ. ತಾಲೂಕಿನ ಗರಗ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹುಚ್ಚೇಶ ಹಿರೇಗೌಡರ ಮೃತಪಟ್ಟಿದ್ದು, ಅದೇ ಠಾಣೆಯ ಲಕ್ಷ್ಮೀ ಎಂಬುವರು ಗಾಯಗೊಂಡಿದ್ದಾರೆ. ಇಬ್ಬರನ್ನೂ ಹುಬ್ಬಳ್ಳಿ ತಾಲೂಕು ಛಬ್ಬಿ ಗಣೇಶೋತ್ಸವ ಪ್ರಯುಕ್ತ ಬಂದೋಬಸ್ತ್ಗೆ ನಿಯೋಜಿಸಲಾಗಿತ್ತು. ಕರ್ತವ್ಯ ನಿರ್ವಹಿಸಿ ಮರಳುತ್ತಿದ್ದ ವೇಳೆ ರಮ್ಯಾ ರೆಸಿಡೆನ್ಸಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪರಿಚಿತ ವಾಹನ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net