ಕ್ಷೇತ್ರ ವ್ಯಾಪ್ತಿಯ ಜನರಿಗೆ ಆರೋಗ್ಯ ಸಹಾಯ- ಕ್ಯಾವಟರ್ ಭರವಸೆ

Maski Basavaraj Kyatar
ಮಸ್ಕಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸೋಲಿನ ಆತ್ಮಾವಲೋಕನ ಸಭೆ
Published on

ಮಸ್ಕಿ: ಲೋಕಸಭೆ ಚುನಾವಣೆಯಲ್ಲಿ ಸೋತಿದ್ದರೂ ನಾನು ಕುಗ್ಗಿಲ್ಲ. ಸಾರ್ವಜನಿಕ ಕ್ಷೇತ್ರದಲ್ಲಿ ಇನ್ನೂ ಹೆಚ್ಚು ತೊಡಗಿಕೊಳ್ಳುತ್ತೇನೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಬಸವರಾಜ ಕ್ಯಾವಟರ್ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಸೋಮವಾರ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಮೇಲೆ ವಿಶ್ವಾಸವಿಟ್ಟು ಕ್ಷೇತ್ರದ ಲಕ್ಷಾಂತರ ಮತದಾರರು ನನ್ನನ್ನು ಬೆಂಬಲಿಸಿದ್ದು, ಅವರ ಋಣ ನನ್ನ ಮೇಲಿದೆ. ನಾನು ವೈದ್ಯನಾಗಿರುವುದರಿಂದ ಆರೋಗ್ಯ ಸಮಸ್ಯೆ ಇರುವವರಿಗೆ ಕೈಲಾದ ಮಟ್ಟಿಗೆ ಸಹಾಯ ಮಾಡುವೆ ಎಂದರು.

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಮತನಾಡಿ, ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಆಗಿರುವ ಬಗ್ಗೆ ನನಗೆ ಬೇಜಾರಿದೆ. ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸಲು ಪ್ರಯತ್ನಿಸುವೆ.

ನಾನು ರಾಜಕೀಯ ನಿವೃತ್ತಿ ಹೊಂದುವೆ ಎಂಬ ಅಭಿಪ್ರಾಯ ಕ್ಷೇತ್ರದಲ್ಲಿ ಹರಿದಾಡುತ್ತಿದ್ದು, ಅದೆಲ್ಲ ವದಂತಿಯಾಗಿದೆ. ನಾನು ಬಿಜೆಪಿಯಲ್ಲಿದ್ದು ಮತ್ತೆ ಚುನಾವಣೆಗೆ ಸಿದ್ಧನಾಗುವೆ ಎಂದರು. ಪ್ರಮುಖರಾದ ಬಸವಂತರಾಯ ಕುರಿ, ಮಲ್ಲಪ್ಪ ಅಂಕುಶದೊಡ್ಡಿ, ಮಂಡಲ ಅಧ್ಯಕ್ಷ ಶರಣಯ್ಯ ಸೊಪ್ಪಿಮಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net