

ಬೇಲೂರು: ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿರುವ ಸಂವಿಧಾನ ಜಾಗೃತಿ ಜಾಥಾ ಬುಧವಾರ ಬೇಲೂರು ತಾಲೂಕಿನ ಕಳ್ಳೇರಿ ಗ್ರಾಮ ಪಂಚಾಯಿತಿಗೆ ಆಗಮಿಸಿತು. ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ಹಕೀಂ ಹಾಗೂ ಸಿಬ್ಬಂದಿ ಸ್ವಾಗತಿಸಿದರು.
ಕಳ್ಳೇರಿ ಗ್ರಾಪಂ ಅಧ್ಯಕ್ಷ ಅಬ್ದುಲ್ ಹಕೀಂ ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ಮಾತನಾಡಿ, ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರು ವಿಶ್ವದ ಜ್ಞಾನಿಯಾಗಿದ್ದಾರೆ. ಸಂವಿಧಾನದ ವಿಚಾರಗಳು ಪ್ರತಿ ಮನೆಗೂ ತಲುಪಬೇಕು. ಈ ನಿಟ್ಟಿನಲ್ಲಿ ಸರ್ಕಾರ ಉತ್ತಮ ಕಾರ್ಯಕ್ರಮ ಆಯೋಜಿಸಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಮೇಶ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಂಗಸ್ವಾಮಿ, ಗ್ರಾಪಂ ಸದಸ್ಯರಾದ ಶ್ರೀನಿವಾಸ್, ಧರ್ಮಯ್ಯ, ಸಂದೀಪ್, ಪಿಡಿಒ ರಮೇಶ್ ಇತರರಿದ್ದರು.