

ಧಾರವಾಡ: ಸಂವಿಧಾನದ ಮೌಲ್ಯಗಳು ಮತ್ತು ಆಶಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜ. 26ರಿಂದ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ. ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಸಂವಿಧಾನ ಜಾಗೃತಿ ಜಾಥಾ ಸ್ತಬ್ದಚಿತ್ರವು ಭೇಟಿ ನೀಡಲಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಅಽಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಗಣರಾಜ್ಯೋತ್ಸವ ದಿನವಾದ 26ರಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜಾಥಾಗೆ ಚಾಲನೆ ನೀಡುವರು. ಜಿಲ್ಲೆಯಾದ್ಯಂತ ಸಂಚರಿಸಲಿರುವ ಸ್ತಬ್ದಚಿತ್ರವು ಫೆ. 25ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಮಾವೇಶದಲ್ಲಿ ಭಾಗವಹಿಸಲಿದೆ. ಇದನ್ನು ಯಶಸ್ವಿಗೊಳಿಸಲು ಎಲ್ಲ ಇಲಾಖೆಗಳ ಅಽಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಉಪ ಪೊಲೀಸ್ ಆಯುಕ್ತ ರಾಜೀವ ಎಂ. ಮಾತನಾಡಿ, ಸ್ತಬ್ದಚಿತ್ರ ಜಾಥಾ ಸಂಚರಿಸುವ ಮಾರ್ಗ, ಅದರ ನಿಲುಗಡೆ ಸ್ಥಳ ಮತ್ತು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಅಗತ್ಯ ಬಂದೋಬಸ್ತ್ ಏರ್ಪಡಿಸಲಾಗುವುದು.
ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕ ಅಲ್ಲಾಬಕಾಷ ಎಂ.ಎಸ್. ಮಾತನಾಡಿ,ಜಾಥಾದ ವೇಳಾಪಟ್ಟಿಯನ್ನು ತಹಸೀಲ್ದಾರ್ ಹಾಗೂ ತಾ.ಪಂ. ಅಽಕಾರಿಗಳಿಗೆ ಮುಂಚಿತವಾಗಿ ನೀಡಲಾಗಿದೆ. ಸ್ತಬ್ದಚಿತ್ರ ಗ್ರಾಮ ಪಂಚಾಯಿತಿಗೆ ಆಗಮಿಸಿದಾಗ ಪಿಡಿಒ ಹಾಗೂ ಅಽಕಾರಿಗಳು ಬರಮಾಡಿಕೊಂಡು ಜಾಗೃತಿ ಮೂಡಿಸಬೇಕು ಎಂದರು.
ಹೆಚ್ಚುವರಿ ಪೊಲೀಸ್ ಅಽÃಕ್ಷಕ ನಾರಾಯಣ ಬರಮನಿ, ಡಿಎಚ್‌ಒ ಡಾ. ಶಶಿ ಪಾಟೀಲ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.