

ಮಂಡ್ಯ: ಗಣರಾಜ್ಯೋತ್ಸವ ಅಂಗವಾಗಿ ಜ.26 ರಿಂದ ಫೆ.23ರವರೆಗೆ ಹಮ್ಮಿಕೊಳ್ಳಲಾಗಿರುವ ಸಂವಿಧಾನ ಜಾಗೃತಿ ಜಾಥಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಶುಕ್ರವಾರ ಚಾಲನೆ ನೀಡಿದರು.
ಜಾಥಾದಲ್ಲಿ ಡೊಳ್ಳು ಕುಣಿತ, ಪೂಜಾ ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಹಾಗೂ ಕಳಸ ಹೊತ್ತ ಮಹಿಳೆಯರು ಜಾಥಾದಲ್ಲಿ ಭಾಗವಹಿಸಿ ವಿಶೇಷ ಮೆರಗು ನೀಡಿದರು.
ಜಿಲ್ಲೆಯ 233 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾಗೃತಿ ಜಾಥಾ ಸಂಚರಿಸಲಿದೆ. ಸಂವಿಧಾನದ ಮಹತ್ವ ಹಾಗೂ ಮೌಲ್ಯದ ಕುರಿತು ಅರಿವು ಮೂಡಿಸುವುದು. ದೇಶದ ಜನತೆಗೆ ಸಂವಿಧಾನ ನೀಡಿರುವ ಹಕ್ಕುಗಳು ಕುರಿತಂತೆ ಮಹಿಳೆಯರು, ಯುವ ಜನತೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲಿದೆ. ಮಾತ್ರವಲ್ಲದೆ ಜಾಥಾದಲ್ಲಿ ಎಲ್.ಇ.ಡಿ ವಾಹನದಲ್ಲಿ ಸಂವಿಧಾನದ ಜಾಗೃತಿ, ಐದು ಗ್ಯಾರಂಟಿ ಯೋಜನೆಯ ವಿಡಿಯೋ ತುಣುಕುಗಳನ್ನು ಪ್ರದರ್ಶಿಸಲಾಗುವುದು.
ಶಾಸಕ ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ದಲಿಂಗೇಶ್ ಇತರರಿದ್ದರು.