

ಕಾನಹೊಸಹಳ್ಳಿ: ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಬೇಕು ಎಂದು ತಾಪಂ ಇಒ ವೈ.ರವಿಕುಮಾರ್ ಹೇಳಿದರು.
ಸಮೀಪದ ಕಾನಾಮಡುಗು ಕಾಲೇಜಿನಲ್ಲಿ ತಾಲೂಕು ಸ್ವೀಪ್ ಸಮಿತಿ, ಗ್ರಾಪಂ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಮತದಾನ ಜಾಗೃತಿಗಾಗಿ ಸಹಿ ಸಂಗ್ರಹ ಅಭಿಯಾನದಲ್ಲಿ ಮಾತನಾಡಿದರು.
ಮನೆಯ ಅಕ್ಕಪಕ್ಕದವರಿಗೂ ಮತದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸಬೇಕು. ಸಂವಿಧಾನಬದ್ಧ ಹಕ್ಕು ಚಲಾಯಿಸಲು ಪ್ರತಿಯೊಬ್ಬರೂ ಉತ್ಸಾಹ ತೋರಿದರೆ ಮಾತ್ರ ಪ್ರಜಾಪ್ರಭುತ್ವದ ಮೌಲ್ಯ ಹೆಚ್ಚಾಗಲಿದೆ. ಗ್ರಾಮೀಣ ಭಾಗದ 74 ಮತಗಟ್ಟೆಗಳಲ್ಲಿ ಈ ಹಿಂದೆ ಕಡಿಮೆ ಮತದಾನವಾಗಿದ್ದು, ಈ ಬಾರಿ ಶೇ.95ಕ್ಕೂ ಅಧಿಕ ಮತದಾನವಾಗಬೇಕಿದೆ ಎಂದು ತಿಳಿಸಿದರು.