

ಸಿಂಧನೂರು: ಸ್ವಾತಂತ್ರ್ಯ, ಸಮಾನತೆ, ನ್ಯಾಯ, ಸಹಬಾಳ್ವೆ, ಐಕ್ಯತೆಯನ್ನು ಎತ್ತಿ ಹಿಡಿಯುವ ಅವಕಾಶವನ್ನು ಸಂವಿಧಾನ ಕೊಟ್ಟಿದೆ ಎಂದು ತಹಸೀಲ್ದಾರ್ ಅರುಣ್ ದೇಸಾಯಿ ಹೇಳಿದರು.
ನಗರದ ತಹಸಿಲ್ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು. ಬಿ.ಆರ್.ಅಂಬೇಡ್ಕರ್ ರಚಿತ ಸಂವಿಧಾನ ದೇಶದ ಪವಿತ್ರ ಗ್ರಂಥವಾಗಿದೆ. ಶತಮಾನಗಳು ಉರುಳಿದರೂ ಸಂವಿಧಾನ ಸಾರ್ವಕಾಲಿಕವಾಗಿ ಉಳಿಯುತ್ತದೆ ಎಂದರು.
ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಶಕ್ತಿಯಾಗಿದ್ದರು. ಅವರಿಂದಾಗಿ ಎಲ್ಲರೂ ಗೌರವದಿಂದ ಬದುಕಲು ಸಾಧ್ಯವಾಗಿದೆ ಎಂದರು.