ಸಂವಿಧಾನ ದಿನ ಜಾಗೃತಿ ಜಾಥಾ

Constitution Day Awareness Jatha
Published on

ಮಡಿಕೇರಿ:

ಸಂವಿಧಾನ ದಿನಾಚರಣೆ ಪ್ರಯುಕ್ತ ಕೊಡಗು ಜಿಲ್ಲಾ ಉಸ್ತುವಾರಿ ಸಚಿವÀ ಎನ್.ಎಸ್. ಬೋಸರಾಜು ಶುಕ್ರವಾರ ಜಾಗೃತಿ ಅಭಿಯಾನದ ಸ್ತಬ್ಧಚಿತ್ರಕ್ಕೆ ಇಲ್ಲಿನ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಸಂವಿಧಾನದ ಮಹತ್ವ ತಿಳಿಯುವ ನಿಟ್ಟಿನಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳಲ್ಲಿ 22 ದಿನಗಳ ಕಾಲ ಸಂವಿಧಾನ ಜಾಗೃತಿ ಜಾಥಾ ಅಭಿಯಾನ ನಡೆಯಲಿದ್ದು, ಶಾಲಾ-ಕಾಲೇಜುಗಳು ಸೇರಿದಂತೆ ಜಿಲ್ಲೆಯ ವಿವಿಧ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಕೈಜೋಡಿಸುವಂತೆ ಕೋರಿದರು.

ಗ್ರಾ.ಪಂ.ವ್ಯಾಪ್ತಿಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು. ಭಾರತ ಸಂವಿಧಾನ ಪೀಠಿಕೆ, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿಕಲ್ಪನೆ ಸಾಮಾಜಿಕ ನ್ಯಾಯ, ಆರ್ಥಿಕ, ಮತ್ತು ರಾಜಕೀಯ ಪರಿಕಲ್ಪನೆ, ಬಸವಣ್ಣನವರ ವಚನಗಳು, ಭಾರತದ ಸಂವಿಧಾನದಲ್ಲಿ ವಚನಗಳ ಪ್ರಸ್ತುತತೆ, ಜಿಲ್ಲೆಯ ಸ್ಥಳೀಯ ಐತಿಹಾಸಿಕ ವ್ಯಕ್ತಿಗಳು, ಸಾಹಿತ್ಯ ದಿಗ್ಗಜರು ಸೇರಿದಂತೆ ಪ್ರಮುಖ ವ್ಯಕ್ತಿಗಳು ಮತ್ತು ಸ್ಥಳೀಯ ಕಲೆ ಮತ್ತು ಸಂಸ್ಕೃತಿಗಳನ್ನು ಒಳಗೊಂಡ ಸ್ತಬ್ಧಚಿತ್ರ ಮೂಲಕ ಸಂವಿಧಾನದ ಜಾಗೃತಿ ಜಾಥಾ ಅಭಿಯಾನ ನಡೆಯಲಿದೆ ಎಂದರು

\ಶಾಸಕ ಡಾ. ಮಂತರ್ ಗೌಡ, ನಗರಸಭೆ ಅಧ್ಯಕ್ಷೆ ಎನ್.ಪಿ.ಅನಿತಾ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ದಿವಾಕರ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net