ಲೂರ್ಡ್ಸ್ ಹಿಲ್ ಶಾಲೆಯಲ್ಲಿ ಸಂವಿಧಾನ ದಿನಾಚರಣೆ

ಚಿತ್ರ 27ಎಸ್ ಡಿ ಪಿ 01
Published on

ಸಿದ್ದಾಪುರ : ಪಾಲಿಬೆಟ್ಟ ಲೂರ್ಡ್ಸ್ ಹಿಲ್ ಶಾಲೆಯ ಆವರಣದಲ್ಲಿ ಸಂವಿಧಾನ ದಿನವನ್ನು ಪ್ರತಿಜ್ಞಾವಿಧಿ ಸ್ವೀಕಾರದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಾಲೆಯ ವ್ಯವಸ್ಥಾಪಕಿ ಸಿಸ್ಟರ್ ಮೇಲನಿ ಅಧ್ಯಕ್ಷತೆ ವಹಿಸಿದ್ದರು. ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವ ರೀತಿಯಲ್ಲಿ 1949 ನವೆಂಬರ್ 26ರಂದು ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು, ಅಂಗೀಕರಿಸಿ, ಶಾಸನವಾಗಿ ವಿಧಿಸಿಕೊಂಡಿದ್ದೇವೆ. ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಭೇದ ಭಾವವಿಲ್ಲದೇ ಭಾರತದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ಪ್ರತಿಯೊಬ್ಬರೂ ಪ್ರತಿಜ್ಞೆ ಮಾಡಿದರು. ಮುಖ್ಯ ಶಿಕ್ಷಕರಾದ ಸಿಸ್ಟರ್ ಐರಿಸ್, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net