ಭಾರತ ಸಂವಿಧಾನ ನಮ್ಮ ರಕ್ಷಾ ಕವಚ

26 Dwd 3
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಪ್ರತಿಯೊಬ್ಬ ಭಾರತೀಯ ಹುಟ್ಟಿನಿಂದ ಸಾಯುವವರೆಗೆ ಸಿಗುವ ಹಕ್ಕು, ಸೌಲಭ್ಯ ಮತ್ತು ಮಾಡಬೇಕಾದ ಕರ್ತವ್ಯಗಳ ಕುರಿತು ಕಾನೂನುಗಳನ್ನು ನೀಡುವ ಭಾರತದ ಸಂವಿಧಾನ ನಮ್ಮ ರಕ್ಷಾ ಕವಚವಾಗಿದೆ ಎಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮಹಾಪೌರ ರಾಮಪ್ಪ ಬಡಿಗೇರ ಹೇಳಿದರು.

ನಗರದ ಡಾ. ಅಣ್ಣಾಜಿರಾವ್ ಸಿರೂರ ಸೃಜನಾ ರಂಗಮ0ದಿರದಲ್ಲಿ ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಭಾರತ ಸಂವಿಧಾನದ ಜಾಗೃತಿ ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಸಂವಿಧಾನ ಎಲ್ಲರಿಗೂ ಪ್ರಾತಿನಿಧ್ಯ ನೀಡಿದೆ. ಎಲ್ಲದಕ್ಕೂ ಸಂವಿಧಾನದಲ್ಲಿ ಪರಿಹಾರವಿದೆ. ಅತ್ಯಂತ ಸುಗಮ, ಸುಲಲಿತ ಆಡಳಿತ ನಮ್ಮ ಸಂವಿಧಾನದಿ0ದ ಸಾಧ್ಯವಾಗಿದೆ ಎಂದರು.

ಉಪ ಮೇಯರ್ ದುರ್ಗಮ್ಮ ಬಿಜವಾಡ, ರಾಜಣ್ಣ ಕೊರವಿ, ರಾಜಶೇಖರ ಕಮತಿ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ. ಶುಭ ಮಾತನಾಡಿದರು.

ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ. ಅವರು ಸಂವಿಧಾನದ ಪೀಠಿಕೆಯನ್ನು ಬೋಽಸಿದರು. ಕರ್ನಾಟಕ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ. ಅರವಿಂದ ಮೂಲಿಮನಿ `ಭಾರತದ ಸಂವಿಧಾನ' ಕುರಿತು ಉಪನ್ಯಾಸ ನೀಡಿದರು.

ಕವಿತಾ ದಾನಪ್ಪ ಕಬ್ಬೇರ, ತುಳಜಪ್ಪ ಪೂಜಾರ ಹಾಗೂ ಜಿಲ್ಲಾ ಜಾಗೃತಿ ಸಮಿತಿಯ ಕಲ್ಮೇಶ ಹಾದಿಮನಿ, ಸಮಿತಿ ಸದಸ್ಯರು, ಸಂಘ- ಸಂಸ್ಥೆಗಳ ಪ್ರಮುಖರು, ಶಾಲಾ- ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net