ಸಂವಿಧಾನ ಪ್ರಜಾಪ್ರಭುತ್ವದ ಬೆನ್ನೆಲುಬು : ನ್ಯಾಯಾಧೀಶೆ ರುಕ್ಮಾ ಎಸ್.ರಾಜ್ ಬಣ್ಣನೆ

New Project (13)
Published on

ಕಾಸರಗೋಡು: ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬಾಗಿರುವ ಸಂವಿಧಾನವನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದು ಹಿರಿಯ ವಿಭಾಗ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ರುಕ್ಮಾ ಎಸ್.ರಾಜ್ ಹೇಳಿದರು.

ಪೆರಿಯ ಡಾ.ಅಂಬೇಡ್ಕರ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ಕಾಸರಗೋಡು ನೇತೃತ್ವದಲ್ಲಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಅಂಬೇಡ್ಕರ್ ಕಲಾ ಮತ್ತು ವಿಜ್ಞಾನ ಕಾಲೇಜು ಸಹಯೋಗದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದ ಪ್ರಸ್ತಾವನೆಯನ್ನು ರುಕ್ಮಾ ಎಸ್.ರಾಜ್ ಓದಿದರು. ಜಿಲ್ಲಾ ವಾರ್ತಾಧಿಕಾರಿ ಎಂ.ಮಧುಸೂದನನ್ ಮುಖ್ಯ ಅತಿಥಿಯಾಗಿದ್ದರು. ಕಾಲೇಜು ಪ್ರಾಂಶುಪಾಲ ಡಾ.ಜಯಚಂದ್ರನ್ ಕೀಯೋತ್ ಅಧ್ಯಕ್ಷತೆ ವಹಿಸಿದ್ದರು. ವಕೀಲ ಗಂಗಾಧರನ್ ಕುಟ್ಟಮತ್ ಉಪನ್ಯಾಸ ನೀಡಿದರು. ಡಾ.ಅಂಬೇಡ್ಕರ್ ವಿದ್ಯಾನಿಕೇತನ ಪ್ರಾಂಶುಪಾಲ ಪಿ.ಸುನೀಲಕುಮಾರ್, ಟ್ರಸ್ಟ್ ಆಡಳಿತಾಧಿಕಾರಿ ಬಿಪುಲಾ ರಾಣಿ, ಕಾಲೇಜಿನ ಆಡಳಿತಾಧಿಕಾರಿ ಕೆ.ವಿ.ಸಾವಿತ್ರಿ ಹಾಗೂ ಕಾಲೇಜು ಒಕ್ಕೂಟದ ಅಧ್ಯಕ್ಷೆ ವಿ.ಅಶ್ವತಿ ಉಪಸ್ಥಿತರಿದ್ದರು.

ಜಿಲ್ಲಾ ಯುವ ಅಧಿಕಾರಿ ಪಿ.ಅಖಿಲ್ ಸ್ವಾಗತಿಸಿದರು. ಕಾಲೇಜಿನ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಸಿ.ಶಿಜಿತ್ ವಂದಿಸಿದರು. ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ಸಂವಿಧಾನ ರಕ್ಷಣಾ ಜಾಗೃತಿ ಮೆರವಣಿಗೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net