

ಬಂಟ್ವಾಳ: ಭಾರತದ ಸಂವಿಧಾನ ವಿಶ್ವದಲ್ಲಿ ಅತಿದೊಡ್ಡ ಸಂವಿಧಾನವಾಗಿದ್ದು, ಸಂವಿಧಾನದಲ್ಲಿ ಅಡಕವಾಗಿರುವ ಮೂಲಹಕ್ಕುಗಳು ಹಾಗೂ ಕರ್ತವ್ಯಗಳನ್ನು ಜೀವನದಲ್ಲಿ ಪಾಲಿಸಿಕೊಂಡು ಉತ್ತಮ ಬದುಕು ಕಟ್ಟುವುದರ ಜತೆಗೆ ಪ್ರಜಾಪ್ರಭುತ್ವವನ್ನು ಬಲಪಡಿಸಿಕೊಳ್ಳಬೇಕು ಎಂದು ಎಸ್‌ವಿಎಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುದರ್ಶನ್ ಬಿ.ಹೇಳಿದರು.
ಎಸ್‌ವಿಎಸ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಆಯೋಜಿಸಲಾದ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಲಕ್ಷ್ಮೀನಾರಾಯಣ ಎನ್.ಮತ್ತು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಶ್ರೀಧರ್ ಎಸ್.ಸ್ವಾಗತಿಸಿದರು, ರಾಜ್ಯಶಾಸ್ತ್ರ ಉಪನ್ಯಾಸಕಿ ರೂಪ ಕಾಯಕ್ರಮ ನಿರೂಪಿಸಿ ವಿದ್ಯಾರ್ಥಿಗಳಿಗೆ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು.