

ಗೋಳಿಯಂಗಡಿ: ಗೋಳಿಯಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯಲ್ಲಿ ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಸಂವಿಧಾನ ದಿನವನ್ನು ಮಂಗಳವಾರ ಆಚರಿಸಲಾಯಿತು.
ಪ್ರಾಂಶುಪಾಲ ನಾಗರಾಜ ವೈದ್ಯ ಅಧ್ಯಕ್ಷತೆ ವಹಿಸಿದ್ದರು. ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಆವರ್ಸೆ, ಗೌರವಾಧ್ಯಕ್ಷ ನಿವೃತ್ತ ಮುಖ್ಯ ಶಿಕ್ಷಕ ಸುರೇಶ್ ಶೆಟ್ಟಿ ಬೆಳ್ವೆ, ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಎಚ್.ವಸಂತಕುಮಾರ್ ಶೆಟ್ಟಿ ಬೆಳ್ವೆ, ಕಾರ್ಯದರ್ಶಿ ವೈ.ಪಟ್ಟಾಭಿರಾಮ್ ಭಟ್ ಮರೂರು, ಆರ್ಡಿ ಬೆಳ್ವೆ ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ್ಗೋಳಿ, ಉಪಾಧ್ಯಕ್ಷ ಮುಸ್ತಾಕ್ ಅಹಮ್ಮದ್ ಬೆಳ್ವೆ, ಕಾರ್ಯದರ್ಶಿ ನಿವೃತ್ತ ಶಿಕ್ಷಕ ಅಣ್ಣಯ್ಯ ಶೆಟ್ಟಿ, ಕೋಶಾಧಿಕಾರಿ ವೈ.ಜಯಪ್ರಕಾಶ್ ಶೆಟ್ಟಿ ಯಳಂತೂರು, ಸದಸ್ಯ, ಪತ್ರಕರ್ತ ಕೆ.ಸಂಜೀವ ಆರ್ಡಿ,ಗೋಳಿಯಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ನಾಗರಾಜ ವೈದ್ಯ, ಪ್ರೌಢ ಶಾಲಾ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕ ರಾಘವೇಂದ್ರ ಗಾಣಿಗ, ಉಪನ್ಯಾಸಕರು ಹಾಗೂ ಸಹ ಶಿಕ್ಷಕ ವೃಂದ ಉಪಸ್ಥಿತರಿದ್ದರು.
ಪ್ರಭಾರ ಮುಖ್ಯ ಶಿಕ್ಷಕ ರಾಘವೇಂದ್ರ ಗಾಣಿಗ ಸ್ವಾಗತಿಸಿದರು. ಉಪನ್ಯಾಸಕ ಪ್ರಕಾಶ್ ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕ ಸುಧಾಕರ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಮಂಜುನಾಥ ವಂದಿಸಿದರು.