ಸಂವಿಧಾನ ದಿನ ಆಚರಣೆ ಕಡ್ಡಾಯ

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನ. 26ರಂದು ಭಾರತದ ಸಂವಿಧಾನ ದಿನ ಆಚರಿಸಲು ಸರ್ಕಾರ ಆದೇಶಿಸಿದೆ. ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಲ್ಲಿ ಸಂವಿಧಾನ ದಿನ ಆಚರಿಸಿ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಶಾಲಾ ಕಾಲೇಜು ಹಾಗೂ ಇಲಾಖಾ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.

ಈ ಕುರಿತು ನಿರ್ದೇಶನ ನೀಡಿರುವ ಅವರು, ಸಂವಿಧಾನ ದಿನ ಆಚರಿಸುವ ಮೂಲಕ ಸಾರ್ವಜನಿಕರಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಸಂವಿಧಾನದ ಮೌಲ್ಯಗಳನ್ನು ಪ್ರಚುರಪಡಿಸಲು ಅಧಿಕಾರಿಗಳು ಕ್ರಮವಹಿಸಬೇಕು. ಈ ರಾಷ್ಟ್ರೀಯ ಆಚರಣೆಯಲ್ಲಿ ಹೆಚ್ಚಿನ ಜನರು ಭಾಗವಹಿಸಬೇಕು.

ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿ, ಶಾಲೆ-ಕಾಲೇಜುಗಳು, ನಗರ ಸ್ಥಳಿಯ ಸಂಸ್ಥೆಗಳು, ಗ್ರಾಮೀಣ ಸ್ಥಳಿಯ ಸಂಸ್ಥೆಗಳು, ಸ್ವಾಯತ್ತ ಸಂಸ್ಥೆಗಳು ಸೇರಿ ಎಲ್ಲೆಡೆ ನ.26 ರಂದು ಭಾರತ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದುವ ಮೂಲಕ ಆಚರಿಸಬೇಕು. ಸಂವಿಧಾನ ಮೌಲ್ಯ, ಮೂಲ ಆಶಯಗಳ ಬಗ್ಗೆ ಚರ್ಚೆ, ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಬೇಕು.

ನ.26 ರಂದು ಬೆಳಗ್ಗೆ 10 ಗಂಟೆಗೆ ಡಾ. ಅಣ್ಣಾಜಿರಾವ ಶಿರೂರ ರಂಗಮಂದಿರದಲ್ಲಿ ಸಾಮೂಹಿಕವಾಗಿ ಸಂವಿಧಾನ ಪೀಠಿಕೆ ಓದುವ ಜಿಲ್ಲಾ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲೆ, ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net