ಸಂವಿಧಾನ ನೀಡಿರುವ ಹಕ್ಕು ಚಲಾಯಿಸಿ

contitution jata
ಯಲಬುರ್ಗಾದಲ್ಲಿ ಹಮ್ಮಿಕೊಂಡಿದ್ದ ಕಡ್ಡಾಯ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯಕುಮಾರ ಕನ್ನೂರ ಮಾತನಾಡಿದರು. ವಕೀಲರ ಸಂಘದ ತಾಲೂಕು ಅಧ್ಯಕ್ಷ ಪ್ರಕಾಶ ಬೆಲೇರಿ, ಸಹಾಯಕ ಸರ್ಕಾರಿ ಅಭಿಯೋಜಕ ಎ.ಐ.ಹಾದಿಮನಿ, ವಕೀಲ ಈರಣ್ಣ ಕೋಳೂರು ಇದ್ದರು.
Published on

ಯಲಬುರ್ಗಾ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯಕುಮಾರ ಕನ್ನೂರ ಹೇಳಿದರು.


ಪಟ್ಟಣದ ಕೋರ್ಟ್ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಡ್ಡಾಯ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂವಿಧಾನ ನೀಡಿರುವ ಮತದಾನದ ಹಕ್ಕು ಚಲಾಯಿಸಿ ಉತ್ತಮ ಸರ್ಕಾರ ಆಯ್ಕೆ ಮಾಡುವ ಹೊಣೆ ಪ್ರತಿಯೊಬ್ಬರ ಮೇಲಿದೆ. ಸುಭದ್ರ ಹಾಗೂ ಸಮರ್ಥ ಆಡಳಿತ ನಡೆಸಲು ತಪ್ಪದೆ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸಬೇಕು ಎಂದು ಕರೆ ನೀಡಿದರು.


ವಕೀಲರ ಸಂಘದ ತಾಲೂಕು ಅಧ್ಯಕ್ಷ ಪ್ರಕಾಶ ಬೆಲೇರಿ, ಸಹಾಯಕ ಸರ್ಕಾರಿ ಅಭಿಯೋಜಕ ಎ.ಐ.ಹಾದಿಮನಿ, ವಕೀಲರಾದ ಈರಣ್ಣ ಕೋಳೂರು, ಎ.ಎಂ.ಪಾಟೀಲ್, ಮಲ್ಲನಗೌಡ ಪಾಟೀಲ್, ಕೆ.ಆರ್.ಬೆಟಗೇರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net