ಸಹಬಾಳ್ವೆಗೆ ಸಂವಿಧಾನ ಸಹಕಾರಿ

ಸಹಬಾಳ್ವೆಗೆ ಸಂವಿಧಾನ ಸಹಕಾರಿ
Published on

ಕೊಳ್ಳೇಗಾಲ: ಸಂವಿಧಾನದಿಂದ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಅವಕಾಶಗಳು ದೊರೆಯುವ ಜತೆಗೆ, ಸಹಬಾಳ್ವೆಯಿಂದ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ತಿಮ್ಮರಾಜೀಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಶ್ಮಿ ಹೇಳಿದರು.

ತಾಲೂಕಿನ ತಿಮ್ಮರಾಜೀಪುರದ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಸಂವಿಧಾನ ಜಾರಿಯಾಗಿ 75 ವರ್ಷಗಳು ತುಂಬುತ್ತಿರುವ ಸವಿನೆನಪಿಗಾಗಿ ನಮ್ಮ ಗ್ರಾಮ ಪಂಚಾಯಿತಿಗೆ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆ ಬಂದಿರುವುದು ಸಂತಸದ ವಿಷಯ. ದೇಶದಲ್ಲಿ ಒಬ್ಬ ಹೆಣ್ಣು ಮಗಳಿಗೆ ಅಧಿಕಾರ ದೊರಕುತ್ತಿವೆ ಎಂದರೆ ಅದಕ್ಕೆ ಅಂಬೇಡ್ಕರ್ ಅವರ ಸಂವಿಧಾನವೇ ಕಾರಣವಾಗಿದೆ. ಸಂವಿಧಾನ ಇಲ್ಲದ ಪ್ರಜಾಪ್ರಭುತ್ವ, ಆತ್ಮ ಇಲ್ಲದ ಜೀವ ಇದ್ದಂತೆ. ಸಂವಿಧಾನದ ಕುರಿತು ಜನಸಾಮಾನ್ಯರು ಅರಿವು ಹೊಂದಿರಬೇಕು ಎಂದರು.

ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ರಥವನ್ನು ಗ್ರಾಮದ ಜನತೆ ಹಾಗೂ ಶಾಲಾ ವಿದ್ಯಾರ್ಥಿಗಳು, ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಸ್ವಾಗತಿಸಿದರು. ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕಿ ಸರಿತಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೇಶವಮೂರ್ತಿ, ಗ್ರಾಮ ಪಂಚಾಯಿತಿ ಸದಸ್ಯ ಕೆಂಪರಾಜು, ಕುಮಾರ್, ಪಿಲಿಫ್ ಪಾಲ್, ಮಹದೇವಸ್ವಾಮಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ತಿಮ್ಮರಾಜೀಪುರ ರಾಜು, ಪಿಡಿಒ ಶಿವಮೂರ್ತಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net