ಸಂವಿಧಾನ ಜನರ ಪ್ರೇರಕ ಶಕ್ತಿ

26blrp1
Published on

ಬೇಲೂರು: ವಿಶ್ವದ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನ ಜನರಿಗೆ ಪ್ರೇರಕ ಶಕ್ತಿಯಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ವಾದ)ಜಿಲ್ಲಾ ಪ್ರಧಾನ ಸಂಚಾಲಕ ಲಕ್ಷ್ಮಣ್ ಹೇಳಿದರು.


ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ದಲಿತ ಪರ ಸಂಘಟನೆಗಳ ನೇತೃತ್ವದಲ್ಲಿ ಪಟ್ಟಣದ ಡಾ.ಅಂಬೇಡ್ಕರ್ ನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಭಾನುವಾರ ಮಾಲಾರ್ಪಣೆ ಸಲ್ಲಿಸಿ ಮಾತನಾಡಿದ ಅವರು, ಆಧುನಿಕ ಭಾರತದಲ್ಲಿ ಸಮಾನತೆ ಸಾರುವ ನಿಟ್ಟಿನಲ್ಲಿ ಸಂವಿಧಾನವು ಮಹತ್ತರವಾಗಿದೆ. ಪ್ರತಿಯೊಬ್ಬರಿಗೂ ಶಿಕ್ಷಣ, ಸಮಾನತೆ ದೊರಕಲು ಸಂವಿಧಾನ ಕಾರಣವಾಗಿದೆ ಎಂದರು.


ದಲಿತ ಮುಖಂಡ ಹಗರೆ ಈಶ್ವರ್ ಪ್ರಸಾದ್ ಮಾತನಾಡಿ, ಸಂವಿಧಾನವು ಸ್ವಾತಂತ್ರೃ, ಸಮಾನತೆ, ಸಹೋದರತೆ, ಭ್ರಾತೃತ್ವ, ಸಮಾಜವಾದಿ, ಜಾತ್ಯತೀತ ಭಾವನೆಗಳನ್ನು ಮೂಡಿಸುವ ಶ್ರೇಷ್ಠ ಗ್ರಂಥವಾಗಿದೆ. ಸಂವಿಧಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ ಎಂದರು.


ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಮೇಶ್, ತಾಪಂ ಮಾಜಿ ಅಧ್ಯಕ್ಷ ಪರ್ವತಯ್ಯ, ದಲಿತ ಮುಖಂಡ ಮಂಜುನಾಥ್, ಚಂದ್ರು, ನಿಂಗರಾಜು, ರಘು, ಸತೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net