ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ

ಚಿತ್ರ 14ಎಸ್ ಡಿ ಪಿ 01.
ಹೊದ್ದೂರು ಗ್ರಾಮ ಪಂಚಾಯಿತಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯ ಹಮೀದ್, ಮೊಣ್ಣಪ್ಪ, ವಕೀಲರಾದ ರಿಯಾಝ್, ಪಂಚಾಯಿತಿ ಸಿಬ್ಬಂದಿ ಇದ್ದರು.
Published on

ಸಿದ್ದಾಪುರ: ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಭಾರತದ ಸಂವಿಧಾನವು ಇಡೀ ವಿಶ್ವಕ್ಕೆ ಮಾದರಿ ಎಂದು ಹೊದ್ದೂರು ಗ್ರಾಪಂ ಅಧ್ಯಕ್ಷ ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ ಹಂಸ ಕೊಟ್ಟಮುಡಿ ಅಭಿಪ್ರಾಯಪಟ್ಟರು.

ಹೊದ್ದೂರು ಗ್ರಾಮ ಪಂಚಾಯಿತಿಯಲ್ಲಿ ಡಾ .ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು, ರಚಿಸಿದ ಸಂವಿಧಾನದಲ್ಲಿ ಸರ್ವರಿಗೂ ಸಮಪಾಲು ಎಂಬುದನ್ನು ಸಾರಿದೆ. ಭಾರತ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನದಲ್ಲಿ ಭಯಮುಕ್ತವಾಗಿ ಬದುಕುವ ಹಕ್ಕನ್ನು ಕಲ್ಪಿಸಿದೆ. ಅಂಬೇಡ್ಕರ್ ಅವರ ತತ್ವ, ಸಿದ್ಧಾಂತವನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.

ಗ್ರಾಮ ಪಂಚಾಯಿತಿ ಸದಸ್ಯ ಹಮೀದ್, ಮೊಣ್ಣಪ್ಪ, ವಕೀಲರಾದ ರಿಯಾಝ್, ಪಂಚಾಯಿತಿ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net