ಸಂವಿಧಾನ ರಕ್ಷಣೆ ನಮ್ಮೆಲ್ಲರ ಹೊಣೆ

7SND-02
Published on

ಸಿಂಧನೂರು: ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳಾಗಿದ್ದಾರೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಡಾ. ನಾಗವೇಣಿ ಪಾಟೀಲ್ ಹೇಳಿದರು.

ಜವಳಗೇರಾ ಸರ್ಕಾರಿ ಪ್ರೌಢಶಾಲೆಯಲ್ಲಿ ಸೇವಾ ಸಿರಿ ಚಾರಿಟಬಲ್ ಟ್ರಸ್ಟ್‌ನಿಂದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಗುರುವಾರ ಮಾತನಾಡಿದರು. ದೇಶದ ಸಂವಿಧಾನ ಎಲ್ಲರಿಗೂ ಶಿಕ್ಷಣದ ಅವಕಾಶ ಒದಗಿಸಿದೆ. ಆದರೆ, ಈಗ ಸಂವಿಧಾನಕ್ಕೆ ಅಪಾಯ ಬಂದೊದಗಿದೆ. ಆದ್ದರಿಂದ ಸಂವಿಧಾನವನ್ನು ರಕ್ಷಿಸಿಕೊಳ್ಳುವ ಹೊಣೆ ನಮ್ಮೆಲ್ಲರ ಮೇಲಿದೆ. ಸ್ವಾತಂತ್ರ್ಯ ಬಂದು 76 ವರ್ಷವಾದರೂ ಶೇ.100 ಸಾಕ್ಷರತೆ ಸಾಧಿಸಲು ಸಾಧ್ಯವಾಗಿಲ್ಲ ಎಂದರು. ಪ್ರಮುಖರಾದ ಶರಣಪ್ಪ, ಅನ್ನಪೂರ್ಣಮ್ಮ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net