ಸಂವಿಧಾನವನ್ನು ತಿರುಚಿದ್ದೇ ಕಾಂಗ್ರೆಸ್: ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ‌ ತಿರುಗೇಟು

bommai siddaramaiah
Published on

ಬೆಂಗಳೂರು: ಸಂವಿಧಾನವನ್ನು ತಿರುಚಿದ್ದೇ ಕಾಂಗ್ರೆಸ್ ಪಕ್ಷ. ಸಂವಿಧಾನ ಗಾಳಿಗೆ ತೂರಿ, ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಿ ಎಲ್ಲರನ್ನೂ ಜೈಲಿಗೆ ತಳ್ಳಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿರುಗೇಟು ನೀಡಿದರು.

ಆರ್​.ಟಿ. ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರಿಗೆ ಸೋಮವಾರ ಪ್ರತಿಕ್ರಿಯಿಸಿದ, ಕಾಂಗ್ರೆಸ್​ನವರಿಂದ ಬಿಜೆಪಿ ಪಾಠ ಕಲಿಯಬೇಕಿಲ್ಲ. ಅಂತಹ ನೈತಿಕತೆಯೂ ಕಾಂಗ್ರೆಸ್​ಗೆ ಇಲ್ಲವೆಂದು ವಾಗ್ದಾಳಿ ನಡೆಸಿದರು.

ದೆಹಲಿ ಪ್ರವಾಸ: ಮುಖ್ಯವಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಭೇಟಿಗಾಗಿ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಅವರ ಭೇಟಿಗೆ ಇನ್ನೂ ಕಾಲಾವಕಾಶ ಸಿಕ್ಕಿಲ್ಲ. ಇದೇ ಸಂದರ್ಭದಲ್ಲಿ ಹಿರಿಯ ವಕೀಲ ಮುಕುಲ್ ರೋಹಟಗಿ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡುವುದು ದೆಹಲಿ ಪ್ರವಾಸದ ಉದ್ದೇಶವೆಂದು ಸಿಎಂ ಬೊಮ್ಮಾಯಿ‌ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net