ಸಂವಿಧಾನ ರಕ್ಷಣೆ ಮಾಡಲು ಒತ್ತಾಯ: ಕುಷ್ಟಗಿಯಲ್ಲಿ ಡಾ.ಅಂಬೇಡ್ಕರ್ ಅಭಿಮಾನಿ ಬಳಗ, ಕರವೇ ಸ್ವಾಭಿಮಾನಿ ಬಣ ಪ್ರತಿಭಟನೆ

160422 Kushtagi Ambadker, Karave Union Protest
ಕುಷ್ಟಗಿಯಲ್ಲಿ ಅಂಬೇಡ್ಕರ್ ಅಭಿಮಾನಿ ಬಳಗ ಹಾಗೂ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
Published on

ಕುಷ್ಟಗಿ: ಸಂವಿಧಾನ ರಕ್ಷಣೆ ಮಾಡುವಂತೆ ಒತ್ತಾಯಿಸಿ ಡಾ.ಅಂಬೇಡ್ಕರ್ ಅಭಿಮಾನಿ ಬಳಗ ಹಾಗೂ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಎಂ.ಸಿದ್ದೇಶಗೆ ಮನವಿ ಸಲ್ಲಿಸಿದರು.

ಜನರಿಂದ ಜನರಿಗಾಗಿ ರಚಿಸಲಾದ ಸಂವಿಧಾನವನ್ನು ಕೆಲ ರಾಜಕಾರಣಿಗಳು ಪ್ರಭಾವ ಬಳಸಿ ಅವರಿಗೆ ಬೇಕಾದಂತೆ ತಿದ್ದುಪಡಿ ಮಾಡುತ್ತಿದ್ದಾರೆ. ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ಕಾಯ್ದೆಗಳನ್ನು ಜನರಿಗೆ ತೊಂದರೆಯಾಗುವ ರೀತಿಯಲ್ಲಿ ತಿದ್ದುಪಡಿ ಮಾಡಲಾಗುತ್ತಿದೆ. ಅಲ್ಪಸಂಖ್ಯಾತರಿಗೂ ದೇಶದಲ್ಲಿ ನೆಮ್ಮದಿಯಿಂದ ಜೀವನ ನಡೆಸಲು ಆಸ್ಪದ ನೀಡುತ್ತಿಲ್ಲ. ಸಂವಿಧಾನದ ಆಶಯಗಳ ವಿರುದ್ಧ ಚಟುವಟಿಕೆಗಳು ನಡೆಯುತ್ತಿದ್ದು, ಅವುಗಳಿಗೆ ಕಡಿವಾಣ ಹಾಕಿ ಸಂವಿಧಾನ ರಕ್ಷಣೆ ಮಾಡುವ ಅಗತ್ಯವಿದೆ ಎಂದು ಕಾರ್ಯಕರ್ತರು ಒತ್ತಾಯಿಸಿದರು. ಪುರಸಭೆ ಅಧ್ಯಕ್ಷ ಜಿ.ಕೆ.ಹಿರೇಮಠ, ಕಾಂಗ್ರೆಸ್ ಮುಖಂಡ ದೊಡ್ಡಬಸನಗೌಡ ಪಾಟೀಲ್ ಬಯ್ಯಪುರ, ಪುರಸಭೆ ಸದಸ್ಯರಾದ ಕಲ್ಲೇಶ ತಾಳದ್, ಮೈನುದ್ದೀನ್ ಮುಲ್ಲಾ, ಪ್ರಮುಖ ದೇವರಾಜ ಹಜಾಳದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net