ಹೊಸ ಮಾರಿಗುಡಿ ಮಾದರಿಯಾಗಿ ನಿರ್ಮಾಣ

pdb
Published on

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಪುರಾತನ ಕಾಲದ ದೇವಸ್ಥಾನಗಳನ್ನೂ ಮೀರಿಸುವಂತೆ ಆಧುನಿಕ ಶೈಲಿಯಲ್ಲಿ ವಾಸ್ತುಪ್ರಕಾರವಾಗಿ ನಿರ್ಮಾಣವಾಗಿರುವ ಕಾಪು ಹೊಸ ಮಾರಿಗುಡಿ ಮಾದರಿಯಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬಣ್ಣಿಸಿದರು.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ ಸಚಿವ ಪರಮೇಶ್ವರ್, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಇಲ್ಲಿನ ಪ್ರತಿಯೊಂದು ಕಲ್ಲುಗಳೂ ಭಕ್ತರ ದೇಣಿಗೆಯದ್ದು ಎಂದು ತಿಳಿದು ಸಂತಸವಾಗಿದೆ. ಭಕ್ತರೆಲ್ಲರಿಗೂ ಸರ್ಕಾರದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ಧಾರ್ಮಿಕತೆ, ಕಲೆ ಮತ್ತು ಸಂಸ್ಕೃತಿಯನ್ನು ಪೋಷಿಸಲು ಸರ್ಕಾರ ನಿರಂತರ ಸಹಕಾರ ನೀಡುತ್ತಾ ಬಂದಿದೆ ಎಂದರು.

ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ ಸಚಿವರಿಗೆ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು. ಬಳಿಕ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಹಾಗೂ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಗೃಹ ಸಚಿವರನ್ನು ಸನ್ಮಾನಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು, ವಿಧಾನ ಪರಿಷತ್ ಮಾಜಿ ಸದಸ್ಯ ವೇಣುಗೋಪಾಲ್, ಹೊಸ ಮಾರಿಗುಡಿ ದೇವಸ್ಥಾನದ ಕಾರ್ಯನಿರ್ವಹಣಾ ಅಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಮಾಧವ ಆರ್.ಪಾಲನ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ.ಶೆಟ್ಟಿ ಬಾಲಾಜಿ, ಕೆಪಿಸಿಸಿ ಕಾರ್ಯದರ್ಶಿ ಎಂ.ಎ.ಗಫೂರ್, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ.ಸುಕುಮಾರ್, ಪಕ್ಷದ ಪ್ರಮುಖರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ಪ್ರಸಾದ್‌ರಾಜ್ ಕಾಂಚನ್, ಸೌರಬ್ ಬಲ್ಲಾಳ್, ಮುರಳಿ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ಸಾಲ್ಯಾನ್, ರವೀಂದ್ರ ಮಲ್ಲಾರು, ಮನೋಹರ್ ರಾವ್, ರವೀಂದ್ರ ಮಲ್ಲಾರು, ಜಯಲಕ್ಷ್ಮೀ ಶೆಟ್ಟಿ, ಚರಿತ ದೇವಾಡಿಗ, ಜಯರಾಮ ಆಚಾರ್ಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net