

ಕುಶಾಲನಗರ: ಕುಶಾಲನಗರದ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದ ಕಾವೇರಿ ನದಿ ದಂಡೆಯಲ್ಲಿ ಸಾರ್ವಜನಿಕ ಗಣಪತಿ ವಿಸರ್ಜನೆಗಾಗಿಯೇ ಬೃಹತ್ ಹೊಂಡ ನಿರ್ಮಾಣ ಮಾಡಲಾಗಿದೆ ಎಂದು ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ತಿಳಿಸಿದ್ದಾರೆ.
ಕಾವೇರಿ ನದಿ ಪಾವಿತ್ರ್ಯತೆ ಕಾಪಾಡುವ ಜತೆಗೆ ನದಿ ಕಲುಷಿತವಾಗುವುದನ್ನು ತಡೆಗಟ್ಟಲು ಈ ಬೃಹತ್ ಗಾತ್ರದ ಹೊಂಡ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ನೈಸರ್ಗಿಕವಾದ ಮಣ್ಣಿನ ಗಣಪತಿಗಳನ್ನೇ ಪೂಜಿಸಲು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಪಂಚಾಯಿತಿ ವತಿಯಿಂದ ಮಾಡಲಾಗಿದೆ. ನಗರ ವ್ಯಾಪ್ತಿಯಲ್ಲಿ ಒಟ್ಟು 13 ಸಾರ್ವಜನಿಕ ಗಣೇಶೋತ್ಸವ ಆಚರಣೆ ಪರವಾನಗಿ ಅರ್ಜಿಗಳು ಬಂದಿವೆ.
ಏಕಗವಾಕ್ಷಿ ಮಾದರಿಯಲ್ಲಿ ಎಲ್ಲಾ ಇಲಾಖೆಯ ಸಿಬ್ಬಂದಿಗಳು ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡಲಾಗಿದೆ. ಅರ್ಜಿದಾರರಿಗೆ ತೊಂದರೆಯಾಗದ ರೀತಿಯಲ್ಲಿ ಸಂಪೂರ್ಣ ವ್ಯವಸ್ಥೆ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.